ರಾಜ್ಯ

ಮಾರಣಾಂತಿಕ‌ ಹಲ್ಲೆಗೊಳಗಾಗಿದ್ದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾರಣಾಂತಿಕ‌ ಹಲ್ಲೆಗೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಸೋಮವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ.

ಮಾರಣಾಂತಿಕ‌ ಹಲ್ಲೆಗೊಳಗಾಗಿದ್ದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ತನ್ವೀರ್ ಸೇಠ್
Published On :

ಮೈಸೂರು: ಮಾರಣಾಂತಿಕ‌ ಹಲ್ಲೆಗೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಸೋಮವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. 

ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ವೀರ್ ಸೇಠ್ ಅವರು ಇಂದು ರಾತ್ರಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. 
ಶಾಸಕರ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ವೈದ್ಯರು ಡಿಸ್ಚಾರ್ಜ್ ಆಗುವಂತೆ ಸೂಚಿಸಿದ್ದು, ಮನೆಯಲ್ಲೆ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ.

ಕಳೆದ ನೆವೆಂಬರ್ 17 ರಂದು ತನ್ವೀರ್ ಸೇಠ್ ಮೇಲೆ ಎಸ್‌ಡಿಪಿಐ ಕಾರ್ಯಕರ್ತ ಫರ್ಹಾನ್ ಪಾಷಾ ಎಂಬಾತ ಕೊಲೆ ಯತ್ನ ನಡೆಸಿದ್ದ. ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ) ಫರ್ಹಾನ್ ಪಾಷಾ ಹಾಗೂ ಇತರೆ ಐವರನ್ನು ಬಂಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.