ಬೆಂಗಳೂರು: ಪಾದಚಾರಿಗೆ ಬೈಕ್ ಡಿಕ್ಕಿ, ಪಾದಚಾರಿ, ಬೈಕ್ ಸವಾರ ಇಬ್ಬರೂ ಸಾವು
ಇಂಜಿನಿಯರ್ ವಿದ್ಯಾರ್ಥಿ ತರಗತಿ ಮುಗಿಸಿ ಪ್ರಾಜೆಕ್ಟ್ ವರ್ಕ್‌ಗಾಗಿ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬೈಕ್ ಸವಾರ ಹಾಗೂ ಪಾದಚಾರಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ಇಂಜಿನಿಯರ್ ವಿದ್ಯಾರ್ಥಿ ತರಗತಿ ಮುಗಿಸಿ ಪ್ರಾಜೆಕ್ಟ್ ವರ್ಕ್‌ಗಾಗಿ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬೈಕ್ ಸವಾರ ಹಾಗೂ ಪಾದಚಾರಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಜೆಪಿ ನಗರದ ನೆಹ. ಎಸ್ ಬಲೋಡಿಯಾ(21) ಹಾಗೂ ವೀವರ್ಸ್ ಕಾಲೋನಿಯ ರಾಮಣ್ಣ (52)ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ಕಸವರಾಜ್ ಸಾಯಿ ನಿತೇಶ್ ಕುಮಾರ್(21) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಬಲೋಡಿಯಾ ಅವರು ಬುಧವಾರ ಬೆಳಿಗ್ಗೆ ಕಾಲೇಜು ತರಗತಿ ಮುಗಿಸಿ ಸ್ನೇಹಿತ ಕಸವರಾಜ್‌ನನ್ನು ಕೆಟಿಎಂ ಡ್ಯೂಕ್ ಬೈಕ್‌ನಲ್ಲಿ ಹಿಂದೆ ಕೂರಿಸಿಕೊಂಡು ಪ್ರಾಜೆಕ್ಟ್ ವರ್ಕ್‌ಗಾಗಿ ಹೋಗುತ್ತಿದ್ದರು. ಈ ವೇಳೆ ನೈಸ್ ರಸ್ತೆಯಲ್ಲಿ ಪಾದಚಾರಿ ರಾಮಣ್ಣ ಎಂಬವರು ಅಡ್ಡ ಬಂದಿದ್ದಾರೆ. ವೇಗವಾಗಿದ್ದ ಬೈಕ್ ನೇರವಾಗಿ ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದೆ.
ಈ ಸಂಬಂಧ ಕೆಎಸ್ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


