ಐಟಿ ಕಚೇರಿ ಮುಂದೆ ಪ್ರತಿಭಟನೆ; ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತಿತರರ ವಿರುದ್ದ ಪ್ರಕರಣ ದಾಖಲು
ಲೋಕಸಭಾ ನೀತಿ ಸಂಹಿತೆ ಉಲ್ಲಂಘಿಸಿ ಆದಾಯ ತೆರಿಗೆ ಎದುರು ಪ್ರತಿಭಟನೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಲೋಕಸಭಾ ನೀತಿ ಸಂಹಿತೆ ಉಲ್ಲಂಘಿಸಿ ಆದಾಯ ತೆರಿಗೆ ಎದುರು ಪ್ರತಿಭಟನೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೊತೆಗೆ, ಪ್ರತಿಭಟನಾ ನಿರತರನ್ನು ತಡೆಯಲು ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕೂಡ ನ್ಯಾಯಾಲಯದ ಸೂಚನೆಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಅಂದಿನ ಬೆಂಗಳೂರು ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರ ವಿರುಯ್ದ್ಧ ಸಹ ದೂರು ದಾಖಲಾಗಿದೆ.ಸಾಮಾಜಿಕ ಕಾರ್ಯಕರ್ತ ಮಲ್ಲಿಕರ್ಜುನ ಎ ಅವರ ದೂರಿನ ಆಧಾರದ ಮೇಲೆ, ನಗರ ನ್ಯಾಯಾಲಯವು ಇತ್ತೀಚೆಗೆ ಕಮರ್ಷಿಯಲ್ ಸ್ಟ್ರೀಟ್ ಪೋಲೀಸರಿಗೆ ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ಕ್ರಿಮಿನಲ್ ಪಿತೂರಿ ಮತ್ತು ಕೇಮ್ದ್ರ ಸರ್ಕಾರದ ವಿರುದ್ಧ ನಿಲುವಿಗೆ ಯತ್ನ, ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪ್ರಕರಣ ದಾಖಲಿಸುವಂತೆ ನಿರ್ದೇಶನ ನೀಡಿತ್ತು.
ಕಾಂಗ್ರೆಸ್ ಮತ್ತು ಜೆಡಿ (ಎಸ್) ನಾಯಕರ ನಿವಾಸದಲ್ಲಿ ನಡೆದ ಆದಾಯ ತೆರಿಗೆ ದಾಳಿಗಳ ವಿರುದ್ಧ ಅಂದಿನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಇಲ್ಲಿನ ಐ-ಟಿ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


