ಬಂಟ್ವಾಳ: ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಕಾಸ್ತ್ರಗಳಿಂದ ದಾಳಿ
ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಮಂಗಳೂರು: ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಅಧ್ಯಕ್ಷ ರಝಾಕ್ ಕುಕ್ಕಾಜೆ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ. ಬಂಟ್ವಾಳ ತಾಲೂಕಿನ ಮಂಚಿ ಎಂಬಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.
ರಝಾಕ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಚಿ ಗ್ರಾಮದ ಮಂಚಿ ಕಟ್ಟೆಯಲ್ಲಿರುವ ಕ್ಲಿನಿಕ್ ವೊಂದಕ್ಕೆ ಇಂದು ರಾತ್ರಿ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಬೈಕ್ ನಲ್ಲಿ ಬಂದ ಮೂವರಿದ್ದ ತಂಡ ರಝಾಕ್ ರಿಗೆ ಮಾರಕಾಸ್ತ್ರ ಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.
ರಝಾಕ್ ಅವರ ಕೈಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸೀದಿ ಃಆಗೂ ವೈಯುಕ್ತಿಕ ಕಾರಣಗಳಿಗೆ ಈ ಹಲ್ಲೆ ನಡೆದಿದೆ ಎನ್ನಲಾಗಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


