ಬೆಂಗಳೂರು: ನಾಪತ್ತೆಯಾಗಿದ್ದ ಪ್ರೇಮಿಗಳ ಮೃತದೇಹ ಪತ್ತೆ, ಕೊಲೆ ಶಂಕೆ
ಪರಸ್ಪರ ಪ್ರೇಮಿಸುತ್ತಿದ್ದ ಖಾಸಗಿ ಕಂಪನಿಯ ಉದ್ಯೋಗಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಾವಿನ ಬಗ್ಗೆ ಅನುಮಾನ ಮೂಡಿದೆ.

ಬೆಂಗಳೂರು: ಪರಸ್ಪರ ಪ್ರೇಮಿಸುತ್ತಿದ್ದ ಖಾಸಗಿ ಕಂಪನಿಯ ಉದ್ಯೋಗಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಾವಿನ ಬಗ್ಗೆ ಅನುಮಾನ ಮೂಡಿದೆ.
ಎಲೆಕ್ಟ್ರಾನಿಕ್ ಸಿಟಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಶ್ರೀಲಕ್ಷ್ಮಿ ಹಾಗೂ ಜನಾರ್ದನ್ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಇಬ್ಬರ ಮೃತ ದೇಹಗಳು ಆನೇಕಲ್‌ನ ಚಿಂತಲ ಮಡಿವಾಳ ಗ್ರಾಮದ ಕೆರೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಅವರಿಬ್ಬರೂ ಕಳೆದ ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಶ್ರೀಲಕ್ಷ್ಮಿ ಹಾಗೂ ಜನಾರ್ದನ್ ಪೋಷಕರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಶೋಧ ಕಾರ್ಯ ನಡೆಸಿದ್ದರು. ಇಂದು ಚಿಂತಲ ಮಡಿವಾಳ ಗ್ರಾಮದ ಕೆಲವರು ಕೆರೆ ಬಳಿಗೆ ಹೋದಾಗ ಶವ ಕೊಳೆತ ವಾಸನೆ ಬಂದಿದೆ. ಬಳಿಕ ಸ್ಥಳಕ್ಕೆ ಹೋಗಿ ನೋಡಿದಾಗ ಮೃತದೇಹ ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


