3-4 ದಿನಗಳಲ್ಲಿ ಕೇಂದ್ರ ಪರಿಹಾರ ಬಿಡುಗಡೆ ಮಾಡಲಿದೆ: ಸಿಎಂ ಯಡಿಯೂರಪ್ಪ
ರಾಜ್ಯಕ್ಕೆ ನೆರೆಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸಲಿದೆ. ಮೂರ್ನಾಲ್ಕು ದಿನದಲ್ಲಿ ಪರಿಹಾರ ಬಿಡುಗಡೆ ಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಮೈಸೂರು: ರಾಜ್ಯಕ್ಕೆ ನೆರೆಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸಲಿದೆ. ಮೂರ್ನಾಲ್ಕು ದಿನದಲ್ಲಿ ಪರಿಹಾರ ಬಿಡುಗಡೆ ಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಭಾದಿತ ಯಾವ ರಾಜ್ಯಕ್ಕೂ ಹಣ ಬಿಡುಗಡೆಯಾಗಿಲ್ಲ. ವಿರೋಧ ಪಕ್ಷದ ನಾಯಕರು ಈ ವಿಷಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುವುದು ಬೇಡ. ದೆಹಲಿಗೆ ಯಾವ ನಿಯೋಗ ಕರೆದೊಯ್ಯುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರನ್ನು ಕಡೆಗಣಿಸಿಲ್ಲ. ಈಗಾಗಲೇ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಕೆಲಸ ನಡೆದಿದೆ ಎಂದರು.
ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ಈಗಾಗಲೇ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಯಾವುದೇ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ತನಿಖೆ ಪೂರ್ಣಗೊಂಡ ಬಳಿಕ ಯಾರೇ ತಪ್ಪು ಮಾಡಿದ್ದರೂ ಬಹಿರಂಗವಾಗಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


