ವಿಜಯಪುರ: ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಹೋಗಿ ಸರ್ಕಾರಿ ಬಸ್ ಗೆ ಟಂಟಂ ಡಿಕ್ಕಿ, ನಾಲ್ವರು ಸಾವು
ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಹೋಗಿ ಟಂಟಂವೊಂದು ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದ್ದು, ಟಂಟಂನಲ್ಲಿದ್ದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ.

ವಿಜಯಪುರ: ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಹೋಗಿ ಟಂಟಂವೊಂದು ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದ್ದು, ಟಂಟಂನಲ್ಲಿದ್ದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ.
ಇಂದು ಬೆಳಗ್ಗೆ ಕೋಲ್ಹಾರ ಬಳಿ ಈ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರೆಲ್ಲರೂ ಬೀಳಗಿ ತಾಲೂಕಿನ ಗಿರಿಸಾಗರದವರು ಎನ್ನಲಾಗಿದೆ.
ಅಪಘಾತವಾಗಿ ಸಾವು, ನೋವು ಸಂಭವಿಸುತ್ತಿದ್ದಂತೆಯೇ ಜನರು ಪೊಲೀಸರ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಹೋದ ಟಂಟಂ ಸರ್ಕಾರಿ ಬಸ್ಗೆ ಡಿಕ್ಕಿಯಾಗಿತ್ತು. ಇದರಿಂದಲೇ ಅಪಘಾತವಾಗಿದೆ ಎಂದು ಆರೋಪಿಸಿದ ಜನರು, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.
ಸಾರ್ವಜನಿಕರು ಪಿಎಸ್ಐ ಹಾಗೂ ಪೇದೆಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಪಿಎಸ್ಐ ಅನಿಲ್ ಕುಂಬಾರ ಕೈ ಮೂಳೆ ಮುರಿದಿದೆ. ಅಲ್ಲದೆ ಪಿಎಸ್ಐ ವಾಹನಕ್ಕೆ ಬೆಂಕಿ ಹಚ್ಚಿದ್ದಲ್ಲದೆ ಕಲ್ಲುತೂರಾಟ ಸಹ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


