ಕೋಲಾರ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಕೋಲಾರ ತಾಲೂಕಿನ ಕ್ಯಾಲನೂರು ಗ್ರಾಮದಲ್ಲಿ ನಡೆದಿದೆ.

ಕೋಲಾರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಕೋಲಾರ ತಾಲೂಕಿನ ಕ್ಯಾಲನೂರು ಗ್ರಾಮದಲ್ಲಿ ನಡೆದಿದೆ.
ಕ್ಯಾಲನೂರಿನ ಚಿಕ್ಕಕೆರೆಗೆ ಬುಧವಾರ ಈಜಲು ಹೋಗಿದ್ದ ನಿಖಿಲ್ (7) ಮತ್ತು ಗಗನ್ (9) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ಇಬ್ಬರು ಮಕ್ಕಳು ಶಾಲೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಮುಗಿದ ಬಳಿಕ ಈಜಲು ತೆರಳಿದ್ದರು. ಈ ವೇಳೆ ಕೆರೆಯ ಹೂಳಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


