ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ ದೂರು ಪರಿಗಣಿಸದಂತೆ ರಾಜ್ಯ ಸರ್ಕಾರ ಆದೇಶ
ರಾಜ್ಯ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಮಾನ್ಯ ಮಾಡದೇ, ಪೂರ್ಣವಿಳಾಸ ಸಮರ್ಪಕ ದಾಖಲೆ ಇರುವ ದೂರುಗಳನ್ನು ಮಾತ್ರ ಪರಿಗಣಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಮಾನ್ಯ ಮಾಡದೇ, ಪೂರ್ಣವಿಳಾಸ ಸಮರ್ಪಕ ದಾಖಲೆ ಇರುವ ದೂರುಗಳನ್ನು ಮಾತ್ರ ಪರಿಗಣಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
ಅನಾಮಧೇಯ ದೂರುಗಳನ್ನು ಪರಿಗಣಿಸದಂತೆ ಸೆಪ್ಟೆಂಬರ್ ಮಾಹೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸರ್ಕಾರ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.
ಅನಾಮಧೇಯ ದೂರುಗಳು ಕೆಲವು ಸಂದರ್ಭಗಳಲ್ಲಿ ದ್ವೇಷ, ಅಸೂಯೆ ಹಾಗೂ ಪೂರ್ವಾಗ್ರಹಪೀಡಿತವಾಗಿರುತ್ತವೆ. ಅಲ್ಲದೇ ದೂರುಗಳಿಗೆ ಸಂಬಂಧಿಸಿದ ಸಮರ್ಪಕ ದಾಖಲೆಗಳನ್ನು ಒದಗಿಸಿರುವುದಿಲ್ಲ. ಇಂತಹ ದೂರುಗಳಿಂದಾಗಿ ಸರ್ಕಾರಿ ನೌಕರರ ದೈನಂದಿನ ಕೆಲಸಕಾರ್ಯಗಳಲ್ಲಿ ಹಸ್ತಕ್ಷೇಪವುಂಟಾಗುತ್ತದೆ. ಹಾಗೂ ದಕ್ಷ ಹಾಗೂ ಪ್ರಾಮಾಣಿಕ ನೌಕರರ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತದೆ. ಹೀಗಾಗಿ ಅವರು ಮುಕ್ತ ಮತ್ತು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ವಿಜಯ್ ಭಾಸ್ಕರ್ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


