ರಾಜ್ಯ

ಕಾಂಗ್ರೆಸ್ಸನ್ನು ರಾಜಕೀಯ ಪಕ್ಷವಾಗಿಸಿ ರಾಜಕೀಯ ಲಾಭ ಪಡೆಯಬಾರದು ಎಂಬುದು ಗಾಂಧೀಜಿ ಆಶಯ: ಸಿಎಂ

ಕಾಂಗ್ರೆಸ್ಸನ್ನು ರಾಜಕೀಯ ಪಕ್ಷವಾಗಿ ಪರಿವರ್ತಿಸಿ ರಾಜಕೀಯ ಲಾಭ ಪಡೆಯಬಾರದು ಎಂದು ಮಹಾತ್ಮ ಗಾಂಧೀಜಿ ಅವರ ಸದಾಶಯ,ದೂರದೃಷ್ಠಿ ಹಾಗೂ ದೂರದೃಷ್ಟಿ ಯ ಚಿಂತನೆಯಾಗಿತ್ತು ಎಂದು ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.

ಕಾಂಗ್ರೆಸ್ಸನ್ನು ರಾಜಕೀಯ ಪಕ್ಷವಾಗಿಸಿ ರಾಜಕೀಯ ಲಾಭ ಪಡೆಯಬಾರದು ಎಂಬುದು ಗಾಂಧೀಜಿ ಆಶಯ: ಸಿಎಂ
ಸಿಎಂ ಯಡಿಯೂರಪ್ಪ
Published On :

ಬೆಂಗಳೂರು: ಕಾಂಗ್ರೆಸ್ಸನ್ನು ರಾಜಕೀಯ ಪಕ್ಷವಾಗಿ ಪರಿವರ್ತಿಸಿ ರಾಜಕೀಯ ಲಾಭ ಪಡೆಯಬಾರದು ಎಂದು ಮಹಾತ್ಮ ಗಾಂಧೀಜಿ ಅವರ ಸದಾಶಯ,ದೂರದೃಷ್ಠಿ ಹಾಗೂ ದೂರದೃಷ್ಟಿ ಯ ಚಿಂತನೆಯಾಗಿತ್ತು ಎಂದು ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.

ಗಾಂಧೀಜಿ 150ನೇ ಜಯಂತಿ ಪ್ರಯುಕ್ತ ಬುಧವಾರ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ದೇಶದ ಜನರನ್ನು ಸಂಘಟಿಸಲು ಪ್ರಮುಖ ಸಂಘಟನೆ ಯಾಗಿದ್ದ ಕಾಂಗ್ರೆಸ್ಸನ್ನು ದೇಶಕ್ಕೆ ಸ್ವಾತಂತ್ರ್ಯ ದೊರೆ ತೊಡನೆಯೇ ವಿಸರ್ಜಿಸುವಂತೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಕರೆ ಕೊಟ್ಟಿದ್ದರು ಎಂಬುದನ್ನು ಸ್ಮರಿಸಿದರು. 

ಗಾಂಧೀಜಿ ಅವರ ಅಹಿಂಸಾ ಚಳವಳಿ ಜಗತ್ತನ್ನೇ ನೆಬ್ಬರಗೊಳಿಸಿತು. ಅವರು ತಂದ ಸ್ವಾತಂತ್ರ್ಯವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಈ ಪುಣ್ಯ ದಿನದಂದು ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ನೆನೆಯೋಣ ಎಂದು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.