ಧಾರವಾಡ: ಕಾರು-ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ: ಮೂವರು ಸಾವು
ಕಾರು ಮತ್ತು ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ-ಗದಗ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಧಾರವಾಡ: ಕಾರು ಮತ್ತು ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ-ಗದಗ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಅಣ್ಣಿಗೇರಿ ತಾಲೂಕಿನ ಭದ್ರಾಪೂರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕೆಎಸ್ ಆರ್ ಟಿಸಿ ಬಸ್ಸು ಕೂಡ ಉರುಳಿ ಬಿದ್ದಿದೆ.
ಕಾರು ಆಂಧ್ರ ಪ್ರದೇಶದ ಮೂಲದ್ದಾಗಿದ್ದು, ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಸ್ಥಳೀಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


