ರಾಜ್ಯ

ಮಂಡ್ಯ ಬಳಿ ಖಾಸಗಿ ಬಸ್ಸಿಗೆ ಕಾರು ಡಿಕ್ಕಿ, ಇಬ್ಬರ ಸಾವು

ಖಾಸಗಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಮಂಡ್ಯ ಬಳಿ ಖಾಸಗಿ ಬಸ್ಸಿಗೆ ಕಾರು ಡಿಕ್ಕಿ, ಇಬ್ಬರ ಸಾವು
ಸಾಂದರ್ಭಿಕ ಚಿತ್ರ
Published On :

ಮಂಡ್ಯ: ಖಾಸಗಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಬುಧವಾರ ತಡರಾತ್ರಿ ನಡೆದಿದೆ.

ಮೈಸೂರು ನಿವಾಸಿಗಳಾದ ಮುದಾಸಿರ್​ ಅಹಮದ್​ ಶರೀಫ್​ (30) ಮತ್ತು ಕಾರು ಚಾಲಕ ತಜಮುಲ್​ ರಜ್ಜ್​ (40) ಮೃತ ದುರ್ದೈವಿಗಳು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿದ್ದೆಯ ಮಂಪರಿನಲ್ಲಿದ್ದ ಇನ್ನೋವ ಕಾರಿನ ಚಾಲಕ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ರಸ್ತೆ ವಿಭಜಕವನ್ನು ಹತ್ತಿಸಿದ್ದು, ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಮೈಸೂರಿನ ಕೆ.ಆರ್​. ಆಸ್ಪತ್ರೆಗೆ ರವಾನಿಸಲಾಗಿದ್ದು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.