ರಾಜ್ಯದ ಬಗ್ಗೆ ನಿರ್ಲಕ್ಷ್ಯ: ಕೇಂದ್ರದ ವಿರುದ್ಧ ಸಂಸತ್ ಆವರಣದಲ್ಲಿ ದೇವೇಗೌಡ ಪ್ರತಿಭಟನೆ
ರಾಜ್ಯದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಂಸತ್ತಿನ ಆವರಣದಲ್ಲಿ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ತುಮಕೂರು: ರಾಜ್ಯದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಂಸತ್ತಿನ ಆವರಣದಲ್ಲಿ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಇದೇ ಮೊದಲ ಬಾರಿಗೆ ತುಮಕೂರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ರಾಜ್ಯದ ಹಿಸಾಸಕ್ತಿ ಹಾಗೂ ರಾಜ್ಯದ ಕುರಿತು ಕೇಂದ್ರ ನಿರ್ಲಕ್ಷ್ಯ ತೋರುತ್ತಿದೆ. ಈ ಹಿಂದೆ 2004ರಲ್ಲಿಯೂ ಅಂದಿನ ಮುಖ್ಯಮಂತ್ರಿಯಾಗಿದ್ದ ಎಸ್ಎಂ.ಕೃಷ್ಣ ವಿರುದ್ಧ ಪ್ರತಿಭಟನೆ ನಡೆಸಿದ್ದೆ. ಇದೀಗ ಮತ್ತೆ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತೇನೆಂದು ಹೇಳಿದ್ದಾರೆ.
ನನ್ನ ಸೋಲು ನನ್ನ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ. ಗೆಲವು, ಸೋಲು ನನಗೆ ದೊಡ್ಡದೇನಲ್ಲ. ಈ ವರೆಗೂ ನಾನು 15 ಚುನಾವಣೆಗಳನ್ನು ಎದುರಿಸಿದ್ದೇನೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೋಲು ಕಂಡಲೂ ಪಕ್ಷಕ್ಕೆ ದೊಡ್ಡ ಗೆಲುವು ದೊರಕಿದೆ. ಜೆಡಿಎಸ್'ಗೆ ಮತ್ತೆ ಒಳ್ಳೆಯ ದಿನಗಳು ಬರಲಿದೆ. ನಮ್ಮ ಪಕ್ಷ ಸರ್ಕಾರ ರಚನೆ ಮಾಡಲಿದೆ. ಸರ್ಕಾರ ಯಾವಾಗ ಬೀಳುತ್ತದೆ ಎಂದು ನಾನು ಭವಿಷ್ಯ ಹೇಳಲು ಸಾಧ್ಯವಿಲ್ಲ. ಆದರೆ, ಸರ್ಕಾರ ಬೀಳುವುದಂತೂ ಖಚಿತ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


