ರಾಜ್ಯ

ಅಕ್ರಮ ವಲಸಿಗರ ಸಮಸ್ಯೆ ನಿವಾರಣೆಗೆ ರಾಜ್ಯದಲ್ಲೂ ಎನ್.ಆರ್.ಸಿ ಜಾರಿಗೆ ಚಿಂತನೆ: ಗೃಹ ಸಚಿವ

ಅಕ್ರಮ ವಲಸಿಗರ ಸಮಸ್ಯೆಗೆ ಪರಿಹಾರ ಸೂಚಿಸುವ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ)ನ ನಿಯಮಾವಳಿಗಳನ್ನು ರಾಜ್ಯದಲ್ಲೂ ಜಾರಿಗೆ ತರಲು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಕ್ರಮ ವಲಸಿಗರ ಸಮಸ್ಯೆ ನಿವಾರಣೆಗೆ ರಾಜ್ಯದಲ್ಲೂ ಎನ್.ಆರ್.ಸಿ ಜಾರಿಗೆ ಚಿಂತನೆ: ಗೃಹ ಸಚಿವ
ಗೃಹ ಸಚಿವ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಅಕ್ರಮ ವಲಸಿಗರ ಸಮಸ್ಯೆಗೆ ಪರಿಹಾರ ಸೂಚಿಸುವ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ)ನ ನಿಯಮಾವಳಿಗಳನ್ನು ರಾಜ್ಯದಲ್ಲೂ ಜಾರಿಗೆ ತರಲು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಸಾಂ ರಾಜ್ಯದಲ್ಲಿ ಎನ್.ಆರ್.ಸಿ. ಜಾರಿಗೊಳಿಸಲು ತೀರ್ಮಾನಿಸಿದ್ದು, ರಾಜ್ಯದಲ್ಲೂ ಇದನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವರ ಜತೆಯೂ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ಬೆಂಗಳೂರಿನಲ್ಲಿ ಬಂಗ್ಲಾದೇಶೀಯರು ಸೇರಿದಂತೆ ಹಲವು ಮಂದಿ ವಲಸಿಗರಿದ್ದಾರೆ. ಅವರ ಚಟುವಟಿಕೆಗಳ ಮೇಲೆ ನಿಗಾ ಇಡುವ ಅಗತ್ಯವಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.