ರಾಜ್ಯ

ಅಕ್ಟೋಬರ್ 10ರಿಂದ ರಾಷ್ಟ್ರಪತಿ ಅವರಿಂದ 3 ದಿನಗಳ ರಾಜ್ಯ ಭೇಟಿ!

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಕ್ಟೋಬರ್ 10ರಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಅಕ್ಟೋಬರ್ 10ರಿಂದ ರಾಷ್ಟ್ರಪತಿ ಅವರಿಂದ 3 ದಿನಗಳ ರಾಜ್ಯ ಭೇಟಿ!
ರಾಮನಾಥ್ ಕೋವಿಂದ್
Published On :

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಕ್ಟೋಬರ್ 10ರಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ರಾಷ್ಟ್ರಪತಿಗಳು ತಮ್ಮ ಮೂರು ದಿನಗಳ ಭೇಟಿಯ ಸಂದರ್ಭದಲ್ಲಿ ಮೈಸೂರಿನ ಮಹಾರಾಜ, ದಿವಂಗತ ಜಯಚಾಮರಾಜ ಒಡೆಯರ್ ಅವರ ಶತಮಾನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದಕ್ಷಿಣ ಭಾರತದ ಅತಿದೊಡ್ಡ ದೇವಾಲಯಗಳಲ್ಲಿ ಒಂದಾದ ನಂಜನಗೂಡಿನಲ್ಲಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ರಾಮನಾಥ್ ಕೋವಿಂದ್,  ಮೈಸೂರಿನ ವರುಣ ಗ್ರಾಮದ ಜೆಎಸ್ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ ಸಂಸ್ಥೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ಭೇಟಿಯ ಮೂರನೇ ದಿನದಂದು ರಾಷ್ಟ್ರಪತಿ ಅವರು  ಮಾಜಿ ಕೇಂದ್ರ ಸಚಿವ ದಿವಂಗತ ಎಚ್. ಎನ್. ಅನಂತ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರು ನಗರದ ಹೊರವಲಯದಲ್ಲಿರುವ ಜಿಗಣಿಯಲ್ಲಿರುವ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥೆಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.