ರಾಜ್ಯ

ಚರ್ಚೆ ಪ್ರಗತಿಯಲ್ಲಿದ್ದು, ಸಿದ್ದರಾಮಯ್ಯ ವಿಪಕ್ಷ ನಾಯಕರಾಗುವ ಸಾಧ್ಯತೆಗಳಿವೆ: ರಾಮಲಿಂಗಾ ರೆಡ್ಡಿ

ವಿಧಾನಸಭೆ ವಿರೋಧ ಪಕ್ಷ ನಾಯಕರ ಆಯ್ಕೆ ಕುರಿತ ಚರ್ಚೆ ಪ್ರಗತಿಯಲ್ಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಪಕ್ಷ ನಾಯಕರಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿಯವರು ಭಾನುವಾರ ಹೇಳಿದ್ದಾರೆ.

ಚರ್ಚೆ ಪ್ರಗತಿಯಲ್ಲಿದ್ದು, ಸಿದ್ದರಾಮಯ್ಯ ವಿಪಕ್ಷ ನಾಯಕರಾಗುವ ಸಾಧ್ಯತೆಗಳಿವೆ: ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
Published On :

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷ ನಾಯಕರ ಆಯ್ಕೆ ಕುರಿತ ಚರ್ಚೆ ಪ್ರಗತಿಯಲ್ಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಪಕ್ಷ ನಾಯಕರಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿಯವರು ಭಾನುವಾರ ಹೇಳಿದ್ದಾರೆ. 

ಪಕ್ಷದ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿಯವರು ನಡೆಸಿದ್ದ ಸಭೆಯಲ್ಲಿ ಭಾಗಿಯಾದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತಂತೆ ಬಹುತೇಕ ಚರ್ಚೆ ನಡೆಯಿತು. ಸಿದ್ದರಾಮಯ್ಯ ಹಾಗೂ ಹೆಚ್.ಕೆ ಪಾಟೀಲ್ ಇಬ್ಬರೂ ರೇಸ್ ನಲ್ಲಿದ್ದಾರೆ. ಸಿದ್ದರಾಮಯ್ಯ ಅವರೇ ವಿರೋಧ ಪಕ್ಷದ ನಾಯಕರಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. 

ಈ ಕುರಿತು ಶಾಸಕರು ಹಾಗೂ ಎಂಎಲ್'ಸಿಗಳೊಂದಿಗೆ ಚರ್ಚೆ ಮುಂದುವರೆದಿದೆ. ಶೀಘ್ರದಲ್ಲೇಯ ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.