ಮೈಸೂರು ದಸರಾ: ಜಂಬೂ ಸವಾರಿಗೆ ಕ್ಷಣಗಣನೆ ಆರಂಭ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಾಂಸ್ಕೃತಿಕ ನಗರಿಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಜಂಬೂ ಸವಾರಿ ಕಣ್ತುಂಬಿಗೊಳ್ಳಲು ನಗರಕ್ಕೆ ಆಗಮಿಸಿದ್ದಾರೆ.
ಅರಮನೆ ನಗರಿ ಮೈಸೂರು ಸಂಪೂರ್ಣ ಶೃಂಗಾರಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ.
ಜಂಬೂ ಸವಾರಿ ಮೆರವಣಿಗೆ ಮೈಸೂರು ಅರಮನೆಯಿಂದ 5 ಕಿ.ಮೀ.ದೂರದಲ್ಲಿರುವ ಬನ್ನಿಮಂಟಪದವರೆಗೂ ಸಾಗಲಿದೆ. ಕ್ಯಾಪ್ಟನ್ ಅರ್ಜುನ 750 ಕೆ.ಜಿ.ತೂಕದ ಚಿನ್ನದ ಅಂಬಾರಿ ಹೊತ್ತು ರಾಜ ಗಾಂಭೀರ್ಯದಿಂದ ಸಾಗಲಿದ್ದಾನೆ. ಜಂಬೂ ಸವಾರಿ ಮೆರವಣಿಗೆಯಲ್ಲಿ ನಾಡಿನ ಕಲೆ, ಸಂಸ್ಕೃತಿಯನ್ನು ಬಿಂಬಿಸುವ 39 ಸ್ತಬ್ಧಚಿತ್ರಗಳೊಂದಿಗೆ ವಿವಿಧ ಜಾನಪದ ಕಲಾತಂಡಗಳು ಭಾಗಿಯಾಗಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


