ಮಡಿವಂತಿಕೆ ಅಲ್ಲದ ಜನಪರ ಆರ್ಥಿಕತೆ ಬೇಕಾಗಿದೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್
ಜನಪರ ಅರ್ಥ ವ್ಯವಸ್ಥೆ ಹಾಳಾಗಿ ಹೋಗಿರುವ ಕಾರಣದಿಂದ ಪವಿತ್ರ ಆರ್ಥಿಕತೆಗಾಗಿ ಚಳವಳಿ ಆರಂಭಿಸಬೇಕಾಗಿದೆ ಎಂದು ವಿಧಾನಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಮುಖಂಡ ಆರ್. ರಮೇಶ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಜನಪರ ಅರ್ಥ ವ್ಯವಸ್ಥೆ ಹಾಳಾಗಿ ಹೋಗಿರುವ ಕಾರಣದಿಂದ ಪವಿತ್ರ ಆರ್ಥಿಕತೆಗಾಗಿ ಚಳವಳಿ ಆರಂಭಿಸಬೇಕಾಗಿದೆ ಎಂದು ವಿಧಾನಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಮುಖಂಡ ಆರ್. ರಮೇಶ್ ಕುಮಾರ್ ಹೇಳಿದ್ದಾರೆ.
'ಪವಿತ್ರ ಆರ್ಥಿಕತೆಗಾಗಿ' ಪ್ರಸನ್ನ ಅವರು ಕೈಗೊಂಡ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ಆರ್ಥಿಕ ಕ್ಷೇತ್ರದಲ್ಲಿ ಪಾವಿತ್ರ್ಯತೆ ಬೇಕು. ಹಾಗಂತ ಅದು ಮತ್ತೆ ಮಡಿವಂತಿಕೆ ಆಗಬಾರದು, ಜನಪರ ಆರ್ಥಿಕತೆ ಆಗಬೇಕಾಗಿದೆ. ಉತ್ಪಾದಕರು ಮತ್ತು ಬಳಕೆದಾರರ ನಡುವಿನ ಅಂತರ ಕಡಿಮೆ ಆಗಬೇಕು. ಮಧ್ಯವರ್ತಿಗಳ ಹಾವಳಿ ಇಲ್ಲದ ಹಾಗೇ ಇದನ್ನು ಮೇಲೆತ್ತಬೇಕು. ತಾವಂತೂ ಈ ಚಳವಳಿಗೆ ಕಾಯಾ ವಾಚಾ ಮನಸಾ ಜೊತೆಗಿದ್ದೇನೆ ಎಂದರು.
ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ ಗೋಪಾಲ ಗೌಡ ಮಾತನಾಡಿ, 'ಮಾನವಹಕ್ಕುಗಳು ಮತ್ತು ಮನುಷ್ಯರ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಎರಡೂ ಸರಕಾರಗಳು ಸೋತಿವೆ. ಬಡತನ, ನಿರುದ್ಯೋಗ, ಅನಾರೋಗ್ಯ, ಪರಿಸರ ಹಾನಿ, ಸಂಪೂರ್ಣ ಕೆಳಗಿಳಿದ ದೇಶದ ಜಿಡಿಪಿ, ರೈತರ ಸರಣಿ ಆತ್ಮಹತ್ಯೆಗಳು, ಪ್ರಕೃತಿ ವಿಕೋಪಕ್ಕೊಳಗಾದ ಜಿಲ್ಲೆ ಹಾಗೂ ಜನರಿಗೆ ಇನ್ನೂ ತಲುಪದ ಪರಿಹಾರ ದಾರಿಗಳು ಇದೆಲ್ಲವನ್ನು ಗಮನದಲ್ಲಿರಿಸಿಕೊಂಡು ಸರಕಾರಗಳು ಕಾರ್ಯನಿರ್ವಹಿಸಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


