ಗದಗ ಪುರಸಭೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು
ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪುರಸಭೆ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ.

ಗದಗ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪುರಸಭೆ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ.
30 ವರ್ಷದ ಬಸವರಾಜ್ ಹೊಸೂರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಶಿರಹಟ್ಟಿ ಪಟ್ಟಣ ಪಂಚಾಯತ್ ನಲ್ಲಿ ವಾಲ್ ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಮೂಲತಃ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಗ್ರಾಮದವನಾದ ಬಸವರಾಜ್ ದಿನಂಪ್ರತಿ ಹಿರಿಯ ಅಧಿಕಾರಿಗಳಿಂದ ಕಿರುಕುಳ ಅನುಭವಿಸುತ್ತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪುರಸಭೆ ಮುಖ್ಯಾಧಿಕಾರಿ ಶೋಭಾ ಬೆಳ್ಳಿಕೊಪ್ಪ ಅವರ ಕಿರುಕುಳಕ್ಕೆ ಬೇಸತ್ತು ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


