ಬೆಂಗಳೂರು: ಪೋಷಕರು ಮೊಬೈಲ್ ಕಿತ್ತುಕೊಂಡಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು
ಮೊಬೈಲ್‌ನ್ನು ಪೋಷಕರು ಕಿತ್ತುಕೊಂಡಿದ್ದರಿಂದ ನೊಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಬೆಂಗಳೂರು: ಮೊಬೈಲ್‌ನ್ನು ಪೋಷಕರು ಕಿತ್ತುಕೊಂಡಿದ್ದರಿಂದ ನೊಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ರಾಜ್‌ಕುಮಾರ್ ರಸ್ತೆಯ ಠ್ಯಾಗೂರ್ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಬೆಸ್ಲಿ(16) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.
10ನೇ ತರಗತಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳದೆ ಸ್ನೇಹಿತರು ಕೊಟ್ಟ ಮೊಬೈಲ್‌ನಲ್ಲೇ ಕಾಲ ಕಳೆಯುತ್ತಿರುವುದನ್ನು ನೋಡಿದ ಪೋಷಕರು ಮೊಬೈಲ್‌ನ್ನು ಕಿತ್ತುಕೊಂಡಿದ್ದರು. ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದಾಗ ಬೆಸ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಾಜಿನಗರ ಪೊಲೀಸರು ಪೋಷಕರ ಹೇಳಿಕೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ವಿದ್ಯಾರ್ಥಿನಿಯ ತಂದೆ ಅರ್ಚಕರಾಗಿ ಹಾಗೂ ತಾಯಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


