ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ಇದು ಸ್ವಾತಂತ್ರ್ಯ ಹರಣ: ಎಚ್.ಡಿ. ದೇವೇಗೌಡ
ವಿಧಾನಸಭೆ ಅಧಿವೇಶನಕ್ಕೆ ವಿದ್ಯುನ್ಮಾನ ಮಾಧ್ಯಮಗಳಿಗೆ ನಿಷೇಧ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು: ವಿಧಾನಸಭೆ ಅಧಿವೇಶನಕ್ಕೆ ವಿದ್ಯುನ್ಮಾನ ಮಾಧ್ಯಮಗಳಿಗೆ ನಿಷೇಧ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಅಧಿವೇಶನಕ್ಕೆ ಟಿವಿ ಚಾನೆಲ್ ಕ್ಯಾಮೆರಾಗಳಿಗೆ ನಿಷೇಧ ಹೇರುವ ಮೂಲಕ ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗುತ್ತಿದೆ. ದಶಕಗಳಿಂದ ನಡೆದುಕೊಂಡು ಬಂದಿದ್ದ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ, ರಾಜ್ಯಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲನೆ ನಡೆಸುತ್ತದೆ ಎಂಬ ಭರವಸೆ ವ್ಯಕ್ತ ಪಡಿಸಿದ್ದಾರೆ.
ಕರ್ನಾಟಕ ವಿಧಾನಸಭೆಗೆ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


