ಜಯಚಾಮರಾಜ ಒಡೆಯರ್ ಪ್ರಜಾಪ್ರಭುತ್ವವಾದಿಯಾಗಿದ್ದರು: ರಾಷ್ಟ್ರಪತಿ ಕೋವಿಂದ್
ಪ್ರಜಾಪ್ರಭುತ್ವವಾದಿಯಾಗಿದ್ದ ಮೈಸೂರು ಅರಸರು ನಾಡಿಗೆ ನೀಡಿದ ಕೊಡುಗೆ ಅಪಾರ, ಅವರ ತತ್ಪಾದರ್ಶಗಳನ್ನು ಅಳವಡಿಸಿಕೊಳ್ಳುವುದೇ ನಾವು ಅವರಿಗೆ ನೀಡುವ ಗೌರವ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು: ಪ್ರಜಾಪ್ರಭುತ್ವವಾದಿಯಾಗಿದ್ದ ಮೈಸೂರು ಅರಸರು ನಾಡಿಗೆ ನೀಡಿದ ಕೊಡುಗೆ ಅಪಾರ, ಅವರ ತತ್ಪಾದರ್ಶಗಳನ್ನು ಅಳವಡಿಸಿಕೊಳ್ಳುವುದೇ ನಾವು ಅವರಿಗೆ ನೀಡುವ ಗೌರವ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಅಭಿಪ್ರಾಯಪಟ್ಟಿದ್ದಾರೆ.
ನಗರದ ಅರಮನೆಯ ದರ್ಬಾರ್ ಹಾಲ್'ನಲ್ಲಿ ಗುರುವಾರ ಸಂಜೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಷನ್ ಆಯೋಡಿಸಿದ್ದ ಮೈಸೂರು ಸಂಸ್ಥಾನದ ಕೊನೆಯ ದೊರೆ ಶ್ರೀಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೂರದೃಷ್ಟಿ ಹೊಂದಿದ್ದ ಮೈಸೂರು ಅರಸರು, ಪ್ರಜಾಪ್ರಭುತ್ವಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅರಸೊತ್ತಿಗೆ ಇದ್ದರೂ ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಪ್ರಜಾಪ್ರಭುತ್ವದಲ್ಲಿ ತಮ್ಮ ಸಂಸ್ಥಾನವನ್ನು ವಿಲೀನಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ಪ್ರತಿನಿಧಿಗಳ ಸಭೆ ಕರೆದು ಈ ತೀರ್ಮಾನ ಕೈಗೊಳ್ಳುವ ಮೂಲಕ ತಾವೊಬ್ಬ ಪ್ರಜಾಪ್ರಭುತ್ವವಾದಿ ಎಂಬುದನ್ನು ಸಾಬೀತುಪಡಿಸಿದ್ದಾರೆಂದು ಕೊಂಡಾಡಿದ್ದಾರೆ.
ಇದೇ ವನೇಳೆ ಮೈಸೂರು ವಿವಿಗೆ ಜಯಚಾಮರಾಜ ಒಡೆಯರ್ ಅವರು ನೀಡಿದ 22 ಎಕರೆ ಪ್ರದೇಶದಲ್ಲಿ ಮೈಸೂರು ವಿವಿ ನಿರ್ಮಿಸುತ್ತಿರುವ ಉನ್ನತ ಶಿಕ್ಷಣ ಸಂಸ್ಥೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶಿಲಾನ್ಯಾಸ ನೆರವೇರಿಸಿದರು. ಶ್ರೀವಿದ್ಯಾ ಸಂಕೀರ್ತನ ಸುಧಾಲಹರಿ ಗ್ರಂಥವನ್ನು ರಾಜ್ಯಪಾಲ ವಜುಭಾಯ್ ವಾಲಾ ಅವರು ಬಿಡುಗಡೆಗೊಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


