ವಿಧಾನಸೌಧ ಭದ್ರತೆ ಹೆಚ್ಚಿಸಲು ಕೊನೆಗೂ ಸರ್ಕಾರ ಗ್ರೀನ್ ಸಿಗ್ನಲ್
ವಿಧಾನಸೌಧ ಸೇರಿದಂತೆ ಇನ್ನಿತರೆ ಸರ್ಕಾರಿ ಕಟ್ಟಡಗಳ ಭದ್ರತೆ ಹೆಚ್ಚಿಸಲು ಕೊನೆಗೂ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಬೆಂಗಳೂರು: ವಿಧಾನಸೌಧ ಸೇರಿದಂತೆ ಇನ್ನಿತರೆ ಸರ್ಕಾರಿ ಕಟ್ಟಡಗಳ ಭದ್ರತೆ ಹೆಚ್ಚಿಸಲು ಕೊನೆಗೂ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ವಿಧಾನಸೌಧ, ವಿಕಾಸ ಸೌಧ, ಎಂಎಸ್ ಬಿಲ್ಡಿಂಗ್, ಶಾಸಕಾಂಗ ಕಚೇರಿ, ರಾಜ್ಯ ಮಾನವ ಹಕ್ಕುಗಳ ಆಯೋಗ, ಮಾಹಿತಿ ಸೌಧ ಹಾಗೂ ಕರ್ನಾಟಕ ಮಾಹಿತಿ ಆಯೋಗ ಕಟ್ಟಡಗಳಲ್ಲಿ ಭದ್ರತೆ ವ್ಯವಸ್ಥೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಈ ಹಿಂದೆ ನಗರ ಪೊಲೀಸ್ ಆಯುಕ್ತರು ಸರ್ಕಾರಕ್ಕೆ ತಿಳಿಸಿದ್ದರು.
18 ಎಕ್ಸ್-ರೇ ಬ್ಯಾಗ್ ಸ್ಕ್ಯಾನರ್ಸ್, 21 ಡೋನ್ ಫ್ರೇಮ್ ಮೆಟಲ್ ಡಿಟೆಕ್ಟರ್, 44 ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ ಸೇರಿದಂತೆ ಹಲವಾರು ಭದ್ರತಾ ಉಪಕರಣಗಳನ್ನು ವಿಧಾನಸೌಧಕ್ಕೆ ಅಳವಡಿಸುವ ಅವಶ್ಯಕತೆಯಿದ್ದು, ಇದಕ್ಕೆ ರೂ.4.52 ಕೋಟಿ ಅಗತ್ಯವಿದೆ ಎಂದು ತಿಳಿಸಿದ್ದರು.
ಪೊಲೀಸ್ ಆಯುಕ್ತರ ಈ ಮನವಿಯನ್ನು ಸ್ವೀಕರಿಸಿರುವ ಗೃಹ ಇಲಾಖೆ ಇದೀಗ ಉಪಕರಣಗಳ ಖರೀದಿಗೆ ಶೇ.50ರಷ್ಟು ಹಣವನ್ನು ಬಿಡುಗಡೆ ಮಾಡಿದೆ.
ಗೃಹ ಇಲಾಖೆ ಹಣ ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಶೀಘ್ರದಲ್ಲೇ ಪೊಲೀಸ್ ಇಲಾಖೆ ಉಪಕರಣಗಳ ಖರೀದಿಗೆ ಟೆಂಡರ್ ಕರೆಯಲಿದೆ.
ಪ್ರಸ್ತುತ ಅಳವಡಿಸಲಾಗಿರುವ ಭದ್ರತಾ ಸಾಧನಗಳನ್ನು ಹಲವು ವರ್ಷಗಳ ಹಿಂದೆ ಅಳವಡಿಸಲಾಗಿದೆ. ಇದೀಗ ಭದ್ರತೆಯನ್ನು ಹೆಚ್ಚಿಸಬೇಕಿದ್ದು, ವ್ಯವಸ್ಥೆಯನ್ನು ನವೀಕರಿಸುವುದು ಅತ್ಯಗತ್ಯವಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಇದೀಗ ಸರ್ಕಾರ ಹಣ ಬಿಡುಗಡೆ ಮಾಡಿದೆ. ಹಳೆಯ ಸಾಧನೆಗಳಿಗೆ ಹೋಲಿಕೆ ಮಾಡಿದರೆ. ಈ ಬಾರಿ ಅಳವಡಿಕೆ ಮಾಡುವ ಉಪಕರಣಗಳು ಅತ್ಯುತ್ತಮವಾಗಿರುತ್ತವೆ. ಪ್ರಸ್ತುತ ಅಳವಡಿಸುವ ಉಪಕರಣಗಳು ಭದ್ರತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


