ಉಡುಪಿ: ಶಾಲಾ ಅವರಣದಲ್ಲೇ ಡಾನ್ ಬಾಸ್ಕೋ ಶಾಲೆ ಪ್ರಾಂಶುಪಾಲ ಆತ್ಮಹತ್ಯೆ
ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಮಹೇಶ್ ಡಿಸೋಜಾ (36) ಶಾಲಾ ಆವರಣದಲ್ಲೇ ನೇಣಿಗೆ ಶರಣಾಗಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಮಹೇಶ್ ಡಿಸೋಜಾ (36) ಶಾಲಾ ಆವರಣದಲ್ಲೇ ನೇಣಿಗೆ ಶರಣಾಗಿದ್ದಾರೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು ಶಾಲೆಯ ಕ್ಯಾಬಿನ್ ಒಳಗೆ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಅದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.
ಉಡುಪಿ ಕ್ರೈಸ್ತ ಸಮುದಾಯದ ಈ ಭಾಗದ ಧರ್ಮಗುರುವೂ ಆಗಿದ್ದ ಮಹೇಶ್ ಡಿಸೋಜಾ ಮೂಲತಃ ಮೂಡಬೆಳ್ಳೆ ಗ್ರಾಮದವರಾಗಿದ್ದಾರೆ. ಇವರು 2013ರಲ್ಲಿ ಧರ್ಮಗುರು ದೀಕ್ಷೆ ಹೊಂದಿದ್ದರು.
ಆರೋಗ್ಯ ಮಾತಾ ಇಗರ್ಜಿ ಆಡಳಿತ ಡಾನ್ ಬಾಸ್ಕೊ ಶಾಲೆಯಲ್ಲಿ ಸಿಬಿಎಸ್ ಸಿ ಪಠ್ಯಕ್ರಮ ಅಳವಡಿಕೆಗೆ ಇವರ ಪಾತ್ರ ಮಹತ್ವದ್ದಾಗಿತ್ತು. ಅಪಾರ ಜನಮೆಚ್ಚುಗೆ ಗಳಿಸಿದ್ದ ಮಹೇಶ್ ಡಿಸೋಜಾ ಅವರ ಈ ನಿರ್ಧಾರ ಸಾರ್ವಜನಿಕರಲ್ಲಿ ತೀವ್ರ ನೋವು ತಂದಿದೆ.
ಘಟನೆ ಸಂಬಂಧ ಶಿರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


