ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಶೀಘ್ರದಲ್ಲೇ ನೀರು: ಗೃಹ ಸಚಿವ ಅಮಿತ್ ಶಾ
ನೀರು ಹಂಚಿಕೆ ಕುರಿತಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವೆ ತಿಕ್ಕಾಟ ಮುಂದುವರೆಯುತ್ತಿರುವ ನಡುವಲ್ಲೇ, ಕರ್ನಾಟಕದಿಂದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಗೆ ಕುಡಿಯಲು ಹಾಗೂ ಕೃಷಿ ಭೂಮಿಗೆ ನೀರು ಒದಗಿಸುವುದಾಗಿ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಜನತೆಗೆ ಭರವಸೆ ನೀಡಿದ್ದಾರೆ.

ಹುಕ್ಕೇರಿ: ನೀರು ಹಂಚಿಕೆ ಕುರಿತಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವೆ ತಿಕ್ಕಾಟ ಮುಂದುವರೆಯುತ್ತಿರುವ ನಡುವಲ್ಲೇ, ಕರ್ನಾಟಕದಿಂದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಗೆ ಕುಡಿಯಲು ಹಾಗೂ ಕೃಷಿ ಭೂಮಿಗೆ ನೀರು ಒದಗಿಸುವುದಾಗಿ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಜನತೆಗೆ ಭರವಸೆ ನೀಡಿದ್ದಾರೆ.
ಮಹಾರಾಷ್ಟ್ರದ ವಿಧಾನಸಭಾ ಕ್ಷೇತ್ರಗಳಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಜಾಟ್'ನ ಕೆಲವು ಭಾಗಗಳಿಗೆ ಕರ್ನಾಟಕದಿಂದ ನೀರು ತರಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.
ವಿಜಯಪುರದ ತುಬಜಿ-ಬಬಲೇಶ್ವರ ಏತ ನೀರಾವರಿ ಯೋಜನೆಯಿಂದ ಮಹಾರಾಷ್ಟ್ರ ರಾಜ್ಯಕ್ಕೆ ನೀರು ಬಿಡುಗಡೆ ಮಾಡಲಾಗುತ್ತದೆ. ಈ ಬಗ್ಗೆ ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀರ್ ಅವರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಾರಾಷ್ಟ್ರ ಗಡಿ ಭಾಗದ ಜನತೆಗೆ ನೀರು ಒದಗಿಸುವಲ್ಲಿ ಕೇಂದ್ರ ಸರ್ಕಾರ ಕೂಡ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


