ರಾಜ್ಯ

ಮುಚ್ಚುತ್ತಿದೆ ಬಿಎಸ್ಎನ್ಎಲ್: ವದಂತಿ ಎಂದ ಅಧಿಕಾರಿಗಳು

ಕೇಂದ್ರ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಸಂಸ್ಥೆ ಭಾರತ್ ಸಂಚಾರ್ ನಿಗಮ ನಿಯಮಿತ (ಬಿಎಸ್ಎನ್ಎಲ್)ನ್ನು ಮುಚ್ಚಲಾಗುತ್ತಿದೆ ಎಂಬುದು ಕೇವಲ ವದಂತಿಯಷ್ಟೇ, ವರದಿಯಲ್ಲಿ ಸತ್ಯಾಂಶಗಳಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮುಚ್ಚುತ್ತಿದೆ ಬಿಎಸ್ಎನ್ಎಲ್: ವದಂತಿ ಎಂದ ಅಧಿಕಾರಿಗಳು
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಸಂಸ್ಥೆ ಭಾರತ್ ಸಂಚಾರ್ ನಿಗಮ ನಿಯಮಿತ (ಬಿಎಸ್ಎನ್ಎಲ್)ನ್ನು ಮುಚ್ಚಲಾಗುತ್ತಿದೆ ಎಂಬುದು ಕೇವಲ ವದಂತಿಯಷ್ಟೇ, ವರದಿಯಲ್ಲಿ ಸತ್ಯಾಂಶಗಳಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಬಿಎಸ್ಎನ್ಎಲ್ ಮುಚ್ಚಲಾಗುತ್ತಿದೆ ಎಂಬ ವರದಿಗಳ ಕುರಿತಂತೆ ಸ್ಪಷ್ಟನೆ ನೀಡಿರುವ ಅಧಿಕಾರಿಗಳು, ಸೇವೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದ್ದು, ಕೆಲವರು ವೃಥಾ ವದಂತಿಗಳನ್ನು ಹರಡುತ್ತಿದ್ದಾರೆ. ಇಂತಹ ಸುದ್ದಿಗಳಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ. ನಿಗಮವನ್ನು ಆರ್ಥಿಕವಾಗಿ ಪುನಶ್ಚೇತನಗೊಳಿಸುವುದು ಸರ್ಕಾರದ ತೀವ್ರ ಪರಿಶೀಲನೆಯಲ್ಲಿದೆ ಎಂದು ಬಿಎಸ್ಎನ್ಎಲ್ ನಿಗಮದ ಕರ್ನಾಟಕ ವೃತ್ತದ ಚೀಫ್ ಜನರಲ್ ಮ್ಯಾನೇಜರ್ ಸುಶಿಲ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. 

ದೇಶದಾದ್ಯಂತ ದೂರ ಸಂಪರ್ಕದ ಎಲ್ಲಾ ವೃತ್ತಗಳಲ್ಲಿ ಮತ್ತು ದೂರದ ಸ್ಥಳಗಳಲ್ಲಿ ನಿಗಮವು ಮೊಬೈಲ್ ಸೇವೆಗಳನ್ನು ಒದಗಿಸುತ್ತಿದೆ. ನೈಸರ್ಗಿತ ವಿಪತ್ತು ಸಂದರ್ಭದಲ್ಲಿಯೂ ನಿಗಮವು ಗ್ರಾಹಕರ ಸಂಕಷ್ಟಕ್ಕೆ ಸ್ಪಂದಿಸುತ್ತಿದೆ. ಕರ್ನಾಟಕದಲ್ಲಿ ಪ್ರವಾಹ ಸಂಭವಿಸಿದಾಗ 8 ದಿನಗಳ ಕಾಲ ಉಚಿತ ವಾಯ್ಸ್ ಕಾಲ್ ಹಾಗೂ ಇಂಟರ್ನೆಟ್ ಸೇವೆಯನ್ನು ಸಲ್ಲಿಸಿದ ಏಕೈಕ ಆಪರೇಟರ್ ಬಿಎಸ್ಎನ್ಎಲ್'ಗೆ ಆಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.