ಯತ್ನಾಳ್ ಗೆ ನೀಡಿರುವ ಶೋಕಾಸ್ ನೋಟೀಸ್ ವಾಪಸ್ ಪಡೆಯಿರಿ: ಅಮಿತ್ ಶಾ ಗೆ ಸ್ವಾಮೀಜಿ ಪತ್ರ
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಹೈಕಮಾಂಡ್ ನೀಡಿರುವ ಶೋಕಾಸ್ ನೊಟೀಸ್ ವಾಪಸ್ಸು ಪಡೆಯುವಂತೆ ಆಂಧ್ರ ಪ್ರದೇಶದ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ವಿಜಯಪುರ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಹೈಕಮಾಂಡ್ ನೀಡಿರುವ ಶೋಕಾಸ್ ನೊಟೀಸ್ ವಾಪಸ್ಸು ಪಡೆಯುವಂತೆ ಆಂಧ್ರ ಪ್ರದೇಶದ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕದ ಅರ್ಧ ಭಾಗ ಮುಳುಗಡೆಯಾಗಿತ್ತು. ನೆರೆ ಸಂತ್ರರಿಗೆ ಪರಿಹಾರ ಬಿಡುಗಡೆ ಮಾಡುವಂತೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಧ್ವನಿ ಎತ್ತಿದ್ದರು. ಕರ್ನಾಟಕದ ಜನತೆ ಪರವಾಗಿ ಯತ್ನಾಳ್ ಮಾತಾಡಿದ್ದಾರೆ. ಅದಕ್ಕಾಗಿ ಬಿಜೆಪಿ ಹೈಕಮಾಂಡ್ಶಾಸಕರಿಗೆ ಶೋಕಾಸ್ ನೋಟಿಸ್ ನೀಡಿದೆ. ಯತ್ನಾಳ್ ಬಿಜೆಪಿಯ ದಕ್ಷ ನಾಯಕ. ಇವರ ಧ್ವನಿಗೆ ನಾವೂ ಬೆಂಬಲ ನೀಡಿದ್ದೇವೆ. ಹೀಗಾಗಿ ಕೂಡಲೇ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು.
ಒಂದು ವೇಳೆ ಯತ್ನಾಳ್ ಮಾತಿನಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮಿಸಬೇಕೆಂದು ಶ್ರೀಶೈಲ ಜಗದ್ಗುರು ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಕೂಡಲೇ ಶೋಕಾಸ್ ನೊಟೀಸ್ ವಾಪಸ್ ಪಡೆಯಬೇಕು, ಇಲ್ಲದಿದ್ದರೇ ಉತ್ತರ ಕರ್ನಾಟಕದಲ್ಲಿ ಬಿಜಿಪಿಗೆ ಸಮಸ್ಯೆ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


