ಉಗ್ರರ ನಿಗ್ರಹಕ್ಕೆ ಬೆಂಗಳೂರಿನಲ್ಲಿ ಎಟಿಎಸ್ ಸ್ಥಾಪನೆ- ಬಸವರಾಜ್ ಬೊಮ್ಮಾಯಿ
ನಗರಕ್ಕೆ ಉಗ್ರರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸಿಮೀತವಾಗಿ ನವೆಂಬರ್ 1 ರಿಂದ ಭಯೋತ್ಪಾದನಾ ನಿಗ್ರಹ ದಳ ಆರಂಭಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ನಗರಕ್ಕೆ ಉಗ್ರರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸಿಮೀತವಾಗಿ ನವೆಂಬರ್ 1 ರಿಂದ ಭಯೋತ್ಪಾದನಾ ನಿಗ್ರಹ ದಳ ಆರಂಭಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಉಗ್ರರ ನೆಲೆಯಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದ ಕಮಿಷನರೇಟ್ ನ ಹಿರಿಯ ಪೊಲೀಸ್ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಲಾಗಿದೆ. ಸಭೆಯಲ್ಲಿ ಎಟಿಎಸ್ ನ್ನು ಸ್ಥಾಪಿಸುವ ಅಗತ್ಯದ ಬಗ್ಗೆ ಚರ್ಚಿಸಲಾಗಿದೆ. ಮಾತ್ರವಲ್ಲ ರಾಜ್ಯದ ಸೂಕ್ಷ್ಮ ಹಾಗೂ ಕರಾವಳಿ ಪ್ರದೇಶಗಳಲ್ಲಿ ಹೈ ಆಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರಿನಲ್ಲಿ 20 ರಿಂದ 22 ಉಗ್ರ ಗುಂಪಿನ ಘಟಕಗಳು ಕಾರ್ಯನಿರ್ವಹಿಸುತ್ತಿರುವುದಾಗಿ ರಾಷ್ಟ್ರೀಯ ತನಿಖಾ ದಳ ಶಂಕೆ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಭಯೋತ್ಪಾದನಾ ನಿಗ್ರಹ ದಳ ಸ್ಛಾಪಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಕಳೆದೊಂದು ವರ್ಷದಲ್ಲಿ ಬೆಂಗಳೂರು ಸಮೀಪ ಅನೇಕ ಸಂಖ್ಯೆಯ ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ ಉಗ್ರರನ್ನು ಬಂಧಿಸಲಾಗಿದ್ದು, ಸ್ಟೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಹಾದಿ ಚಟುವಟಿಕೆಗಳಿಗಾಗಿ ಕೃಷಗಿರಿ ಬೆಟ್ಟವನ್ನು ತಾಣವನ್ನಾಗಿ ಮಾಡಿಕೊಂಡಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ರಾಷ್ಟ್ರೀಯ ತನಿಖಾ ದಳದೊಂದಿಗೆ ಸಮನ್ವಯತೆಯೊಂದಿಗೆ ಭಯೋತ್ಪಾದನಾ ನಿಗ್ರಹ ದಳ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


