ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆಯಾಗಿ ಮಂಜಮ್ಮ ಜೋಗತಿ ಆಯ್ಕೆ!
ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆಯಾಗಿ ಮಂಜಮ್ಮ ಜೋಗತಿ ಆಯ್ಕೆಯಾಗಿದ್ದಾರೆ. ಇಂದಿನಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಹೊಸಪೇಟೆ: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆಯಾಗಿ ಮಂಜಮ್ಮ ಜೋಗತಿ ಆಯ್ಕೆಯಾಗಿದ್ದಾರೆ. ಇಂದಿನಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಹಿರಿಯ ಕಂಗ ಕಲಾವಿದೆಯಾಗಿರುವ ಮಂಜಮ್ಮ, ಮಂಗಳಮುಖಿಯಾಗಿ ಸಾಕಷ್ಟು ನೋವುಂಡಿದ್ದಾರೆ. ಕೌಟುಂಬಿಕ ಬಹಿಷ್ಕಾರಕ್ಕೆ ಒಳಗಾಗಿ ಜೋಗತಿ ವೃತ್ತಿಯನ್ನೇ ಬದುಕಿಗೆ ಆಧಾರ ಮಾಡಿಕೊಂಡು, ತಮ್ಮ 14ನೇ ವಯಸ್ಸಿನಿಂದಲೂ ಕಲಾ ಸೇವೆ ಮಾಡುತ್ತಾ ಬಂದಿದ್ದಾರೆ. ಜನಪದ ನೃತ್ಯದ ಮೂಲಕ ಗ್ರಾಮ, ಜಾತ್ರೆ, ಸಂತೆ, ವೇದಿಕೆ ಮತ್ತಿತರ ಕಡೆಗಳಲ್ಲಿ ಸಾವಿರಾರು ಪ್ರದರ್ಶನಗಳನ್ನು ನೀಡಿದ್ದಾರೆ.
ಜೋಗತಿ ಕಲೆ ಪ್ರದರ್ಶನ ಜೊತೆಗೆ, ನಾಟಕ, ನಿರ್ದೇಶನ, ಹಾಡು, ಕುಣಿತ ಮುಂತಾದ ಮನೋರಂಜನಾತ್ಮಕ ಕಲೆಗಳನ್ನು ರೂಢಿಸಿಕೊಂಡಿರುವ ಮಂಜಮ್ಮ ಜೋಗತಿ ಅವರಿಗೆ ರಾಜ್ಯ ಜಾನಪದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಜಾನಪದ ಜಾನ ಪ್ರಶಸ್ತಿ, ಜಾನಪದ ಲೋಕ , ಶ್ರೀ ತಾಯಮ್ಮ ಮಲ್ಲಮ್ಮ ದತ್ತಿನಿಧಿ, ಸೇರಿದಂತೆ 2010ರಲ್ಲಿ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯೂ ಸಂದಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಖ್ಯಾತ ನಿರ್ದೇಶಕ ಟಿಎಸ್ ನಾಗಾಭರಣ ಸೇರಿದಂತೆ ಒಟ್ಟು 16 ಅಕಾಡೆಮಿಗಳಿಗೆ ಅಧ್ಯಕ್ಷ , ಸದಸ್ಯರನ್ನು ಆಯ್ಕೆ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


