ಎಸಿಬಿ ದಾಳಿ: ಕೆಐಎಡಿಬಿ ಹಿರಿಯ ಸಹಾಯಕ ಸೇರಿ 7 ಮಂದಿ ಸೆರೆ
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹಿರಿಯ ಸಹಾಯಕ ಸೇರಿ ಮಧ್ಯವರ್ತಿಗಳನ್ನು ಒಳಗೊಂಡಂತೆ 7 ಜನರನ್ನು ಬಂಧಿಸಿದೆ ಮತ್ತು ದಾಳಿಯಲ್ಲಿ ವಿವಿಧ ಬ್ಯಾಂಕುಗಳ 12,90,620 ನಗದು, 13 ಖಾಲಿ ಚೆಕ್‌ಗಳನ್ನು ವಶಪಡಿಸಿಕೊಂಡಿದೆ.

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹಿರಿಯ ಸಹಾಯಕ ಸೇರಿ ಮಧ್ಯವರ್ತಿಗಳನ್ನು ಒಳಗೊಂಡಂತೆ 7 ಜನರನ್ನು ಬಂಧಿಸಿದೆ ಮತ್ತು ದಾಳಿಯಲ್ಲಿ ವಿವಿಧ ಬ್ಯಾಂಕುಗಳ 12,90,620 ನಗದು, 13 ಖಾಲಿ ಚೆಕ್‌ಗಳನ್ನು ವಶಪಡಿಸಿಕೊಂಡಿದೆ.
ಕೈಗಾರಿಕಾ ಅಭಿವೃದ್ಧಿ ಉದ್ದೇಶಕ್ಕಾಗಿ ಕೆಐಎಡಿಬಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡ ರೈತರಿಂದ ಮಧ್ಯವರ್ತಿಗಳು ಖಾಲಿ ಚೆಕ್ ಸಂಗ್ರಹಿಸುತ್ತಿದ್ದರು. ಭೂಮಿ ಕಳೆದುಕೊಂಡಿದ್ದಕ್ಕೆ ಸರ್ಕಾರ ನೀಡುವ ಪರಿಹಾರದ ಮೊತ್ತ ರೈತರ ಬ್ಯಾಂಕ್ ಖಾತೆಗೆ ಜಮಾ ಆದಾಗ ಅದರಿಂದ ಶೇಕಡಾ 10ರಷ್ಟು ಕಮಿಷನ್ ಪಡೆಯಲು ಈ ರೀತಿ ಚೆಕ್ ಪಡೆಯಲಾಗಿತ್ತು ಎಂದು ಎಸಿಬಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೈಗಾರಿಕಾ ಅಭಿವೃದ್ಧಿ ಉದ್ದೇಶಕ್ಕಾಗಿ ರೈತರಿಂದ ಸ್ವಾಧೀನಪಡಿಸಿಕೊಂಡ 800 ಎಕರೆ ಭೂಮಿಗೆ ಪರಿಹಾರ ಪಾವತಿಸಲು ಕರ್ನಾಟಕ ಸರ್ಕಾರ ಇತ್ತೀಚೆಗೆ 50 ಕೋಟಿ ರೂ.ಬಿಡುಗಡೆ ಮಾಡಿತ್ತು. ಇದರ ಸುಳಿವು ಅರಿತ ಮಧ್ಯವರ್ತಿಗಳು ಈ ಸಂಚು ರೂಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


