ರಾಜ್ಯ

ಎಂ.ಎಂ‌. ಕಲಬುರ್ಗಿ ಹತ್ಯೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಸಂಶೋಧಕ ಡಾ‌. ಎಂ.ಎಂ‌. ಕಲಬುರ್ಗಿ ಅವರನ್ನು ಹತ್ಯೆಗೈದ ಆರೋಪಿಗಳು ಗುರುವಾರ ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದರು.

ಎಂ.ಎಂ‌. ಕಲಬುರ್ಗಿ ಹತ್ಯೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಎಂ.ಎಂ.ಕಲ್ಬುರ್ಗಿ
Published On :

ಧಾರವಾಡ: ಸಂಶೋಧಕ ಡಾ‌. ಎಂ.ಎಂ‌. ಕಲಬುರ್ಗಿ ಅವರನ್ನು ಹತ್ಯೆಗೈದ ಆರೋಪಿಗಳು ಗುರುವಾರ ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದರು.

ಎಸ್‌.ಐ‌.ಟಿ ತಂಡ ಚಾರ್ಜಶೀಟ್ ಸಲ್ಲಿಸಿದ ನಂತರ ಇದೇ ಮೊದಲ ಬಾರಿಗೆ ವಿಚಾರಣೆ ನಡೆಯುತ್ತಿದೆ. ಕಳೆದ ಆಗಸ್ಟ್ 17ರಂದು ಜಿಲ್ಲಾ ನ್ಯಾಯಾಲಯಕ್ಕೆ ಎಸ್.ಐ.ಟಿ ತಂಡ ಚಾರ್ಜಶೀಟ್ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಚಾರ್ಜಶೀಟ್ ಸಲ್ಲಿಕೆ ಬಳಿಕ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿದೆ.

ಹತ್ಯೆಗೈದ ಆರು ಆರೋಪಿಗಳ ಪೈಕಿ ಐವರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಓರ್ವ ಆರೋಪಿ ಗೈರಾಗಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಗಳು ಮುಂಬೈ, ಮೈಸೂರು, ಬೆಳಗಾವಿ ಹಾಗೂ ಧಾರವಾಡ ಜೈಲಿನಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.