ವಿಜಯಪುರ: ಕಾಣೆಯಾಗಿದ್ದ ಯುವತಿ ಮೃತದೇಹ ನೀರಿನ ಟ್ಯಾಂಕ್ ನಲ್ಲಿ ಪತ್ತೆ, ಕೊಲೆ ಶಂಕೆ
ಮನೆಯಿಂದ ಕಾಣೆಯಾಗಿದ್ದ ಯುವತಿಯೋರ್ವಳ ಶವ ಮನೆಯ ಮುಂದಿನ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿಜಯಪುರ: ಮನೆಯಿಂದ ಕಾಣೆಯಾಗಿದ್ದ ಯುವತಿಯೋರ್ವಳ ಶವ ಮನೆಯ ಮುಂದಿನ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವಿಜಯಪುರ ನಗರದ ವಿವೇಕ ನಗರದ ಮನೆಯ ಮುಂದಿನ ಟ್ಯಾಂಕ್ ನಲ್ಲಿ ರುಕ್ಮಿಣಿ ಉಪ್ಪಲದಿನ್ನಿ(24) ಅವರ ಶವವಾಗಿ ಪತ್ತೆಯಾಗಿದೆ.
ಕಳೆದ ರವಿವಾರ ಮನೆಯಿಂದ ರುಕ್ಮಿಣಿ ಉಪ್ಪಲದಿನ್ನಿ ಮನೆಯಿಂದ ಕಾಣೆಯಾಗಿದ್ದಾಳೆ ಎಂದು ಆಕೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾದ ಹಿನ್ನೆಲೆಯಲ್ಲಿ ರುಕ್ಮಿಣಿಯನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಜಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


