2 ನೇ ಬಾರಿಗೆ ಲಿಂಗನಮಕ್ಕಿ ಜಲಾಶಯದಿಂದ ನೀರು ಹರಿಸಿದ ಸರ್ಕಾರ
ಈ ವರ್ಷದಲ್ಲಿ ಎರಡನೇ ಬಾರಿಗೆ 15ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗಿದೆ. ಶುಕ್ರವಾರ ಸಂಜೆ ಸರ್ಕಾರ ಸದ್ದಿಲ್ಲದೇ ನೀರು ಬಿಡುಗಡೆ ಮಾಡಲಾಗಿದೆ.

ಶಿವಮೊಗ್ಗ: ಈ ವರ್ಷದಲ್ಲಿ ಎರಡನೇ ಬಾರಿಗೆ 15ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗಿದೆ. ಶುಕ್ರವಾರ ಸಂಜೆ ಸರ್ಕಾರ ಸದ್ದಿಲ್ಲದೇ ನೀರು ಬಿಡುಗಡೆ ಮಾಡಲಾಗಿದೆ.
ಜಲಾಶಯದ ಮಟ್ಟ 1819 ಅಡಿ ತಲುಪಿದ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ಪ್ರಾಧಿಕಾರ ಅಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಮೊದಲಿಗೆ ಅಧಿಕಾರಿಗಳು ಮೂರು ಕ್ರೆಸ್ಟ್ ಗೇಟ್ ರಿಲೀಸ್ ಮಾಡಿ 4 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗಿತ್ತು, ಮತ್ತೆ 15 ಸಾವಿರ ಕ್ಯೂಸೆಕ್ಸ್ ಬಿಡುಗಡೆ ಮಾಡಲಾಗಿದೆ.
ಕಳೆದ ತಿಂಗಳು ಅಧಿಕಾರಿಗಳು ಜಲಾಶಯದಿಂದ ನೀರು ಹರಿಸಿದ್ದಾರೆ, ಆಗ ಅಧಿಕಾರಿಗಳು 23ಸಾವಿರ ಕ್ಯೂಸೆಕ್ಸ್ ನೀರು ರಿಲೀಸ್ ಮಾಡಿತ್ತು. ಆದರೆ ಸತತವಾಗಿ ಮಳೆ ಸುರಿದ ಕಾರಣ ಜಲಾಶಯದ ನೀರಿನ ಮಟ್ಟ ಹೆಚ್ಚಿತ್ತು.
ಆಗಸ್ಟ್ 3 2019 ರಂದು ಜಲಾಶಯದ ನೀರಿನ ಮಟ್ಟ ಗರಿಷ್ಠ 1780.65 ಅಡಿ ತಲುಪಿತ್ತು, ಅದಾದ ನಂತರ 30 ದಿನಗಳಲ್ಲಿ 1819 ಅಡಿ ತಲುಪಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


