ವಲಸಿಗರಂತೆ ರಾಜ್ಯ ಪ್ರವೇಶಿಸಿರುವ ಜೆಎಂಬಿ: ಉಗ್ರರ ಸ್ಲೀಪರ್ ಸೆಲ್ ಆಗುತ್ತಿದೆ ಬೆಂಗಳೂರು, ಮೈಸೂರು!
ಬಾಂಗ್ಲಾದೇಶದ ಅಕ್ರಮ ವಲಸಿಗರ ಸೋಗಿನಲ್ಲಿ ಬಾಂಗ್ಲಾದೇಶದ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕರು ರಾಜ್ಯ ಪ್ರವೇಶಿಸಿದ್ದು, ಮೈಸೂರು, ಕರಾವಳಿ ಪ್ರದೇಶ ಹಾಗೂ ಬೆಂಗಳೂರು ನಗರದಲ್ಲಿ ಸಕ್ರಿಯರಾಗಿದ್ದಾರೆಂದು ತಿಳಿದುಬಂದಿದೆ.

ಮೈಸೂರು: ಬಾಂಗ್ಲಾದೇಶದ ಅಕ್ರಮ ವಲಸಿಗರ ಸೋಗಿನಲ್ಲಿ ಬಾಂಗ್ಲಾದೇಶದ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕರು ರಾಜ್ಯ ಪ್ರವೇಶಿಸಿದ್ದು, ಮೈಸೂರು, ಕರಾವಳಿ ಪ್ರದೇಶ ಹಾಗೂ ಬೆಂಗಳೂರು ನಗರದಲ್ಲಿ ಸಕ್ರಿಯರಾಗಿದ್ದಾರೆಂದು ತಿಳಿದುಬಂದಿದೆ.
ರಾಷ್ಟ್ರೀಯ ತನಿಖಾ ದಳ (ಎನ್ಐಎ) ಈ ಮಾಹಿತಿಯನ್ನು ನೀಡಿದ್ದು, ಬೆಂಗಳೂರು, ಮೈಸೂರು, ಕರಾವಳಿ ಪ್ರದೇಶ ಸೇರಿದಂತೆ ರಾಜ್ಯಾದಾದ್ಯಂತ ಕಟ್ಟುನಿಟ್ಟಿನ ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ,
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು, ಬಾಂಗ್ಲಾದೇಶದ ಮುಜಾಹಿದ್ದೀನ್ ಸಂಘಟನೆಯ ಉಗ್ರರು ಜಮ್ಮು ಮತ್ತು ಕಾಶ್ಮೀರ ಮತ್ತು ಕರ್ನಾಟಕ ರಾಜ್ಯಕ್ಕೆ ನುಸುಳಿದ್ದಾರೆ ಎಂದು ಎನ್ಐಎಯಿಂದ ಮಾಹಿತಿ ಬಂದಿದೆ. ಹೀಗಾಗಿ ರಾಜ್ಯದ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರಾವಳಿ ಪ್ರದೇಶ, ಬೆಂಗಳೂರು ನಗರದಂತಹ ಸ್ಲೀಪರ್ ಸೆಲ್ ಗಳಲ್ಲಿ ಇಂತಹ ಉಗ್ರರು ಇರುವ ಸಾಧ್ಯತೆಗಳಿವೆ. ಅದರಲ್ಲೂ ಕರಾವಳಿ ಪ್ರದೇಶದಲ್ಲಿಯೇ ಈ ಉಗ್ರರು ಹೆಚ್ಚು ಸಕ್ರಿಯವಾಗಿರುವ ಕುರಿತು ಎನ್ಐಎ ಮಾಹಿತಿ ನೀಡಿದೆ. ಹೀಗಾಗಿ ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ನಿಗಾಯಿರಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ಇದ್ದರೆ ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದಿದ್ದಾರೆ.
ಬೆಂಗಳೂರಿನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಉಗ್ರರ ಅಡುಗುತಾಣಗಳು ಪತ್ತೆಯಾಗಿವೆ ಎನ್ನುವ ಸುದ್ದಿಗಳ ಕುರಿತು ಪ್ರತಿಕ್ರಿಯೆ ನೀಡಲು ಸಚಿವರು ಇದೇ ವೇಳೆ ನಿರಾಕರಿಸಿದ್ದಾರೆ.
ಕೆಲ ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಸಾಧ್ಯವಿಲ್ಲ. ಉಗ್ರರನ್ನು ಯಾವ ರೀತಿ ನಿಯಂತ್ರಿಸಬೇಕೆನ್ೇನು ಬಗ್ಗೆ ಗೌಪ್ಯವಾಗಿ ಕೆಲಸ ಮಾಡಲಾಗುತ್ತಿದೆ. ಪೊಲೀಸರು ಸಂಗ್ರಹಿಸಿರುವ ಮಾಹಿತಿ ಸರಿಯಾಗಿದ್ದರೆ ಯಾರಿಂದಲೂ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ. ಪೊಲೀಸರು ಕಳ್ಳರು, ಭಯೋತ್ಪಾದಕರಿಗೆ ಕಠಿಣವಾಗಿರಬೇಕು. ಜನಸಾಮಾನ್ಯರಿಗೆ ಆತ್ಮೀಯರಾಗಿರಬೇಕು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


