ಮಂಡ್ಯ: ಬೈಕ್ -ಟಿಪ್ಪರ್ ನಡುವೆ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ
ಎರಡು ಬೈಕುಗಳು ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತ ನಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದ ಸಮೀಪದ ಮೈಸೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮಂಡ್ಯ: ಎರಡು ಬೈಕುಗಳು ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತ ನಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದ ಸಮೀಪದ ಮೈಸೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಪುರ ಗ್ರಾಮದ ಕೃಷ್ಣೇಗೌಡರ ಪತ್ನಿ ಸುಲೋಚನ(26) ಮತ್ತು ಮಂಡ್ಯದ ದುದ್ದ ಹೋಬಳಿ ಹೊನ್ನೇನಹಳ್ಳಿ ಗ್ರಾಮದ ಕುಮಾರ (26) ಎಂಬುವವರೇ ಮೃತ ದುರ್ದೈವಿಗಳು..
ಕೃಷ್ಣೇಗೌಡ ದಂಪತಿ ಮರಡಹಳ್ಳಿ ಗ್ರಾಮದಿಂದ ತಮ್ಮ ಊರಿಗೆ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಬೈಕಿನ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿದೆ, ವೇಳೆ ಕೃಷ್ಣೇಗೌಡರ ಹಿಂದೆ ಕುಳಿತಿದ್ದ ಪತ್ನಿ ಸುಲೋಚನ ರಸ್ತೆಗೆ ಬಿದ್ದಾಗ ಹಿಂದೆ ಬರುತ್ತಿದ್ದ ಟಿಪ್ಪರ್ ಹರಿದು ಸುಲೋಚನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೊಂದು ಬೈಕಿನಲ್ಲಿದ್ದ ಕುಮಾರ ಎಂಬಾತನಿಗೆ ಗಂಭೀರ ಸ್ವರೂಪದ ಪೆಟ್ಟಾಗಿ ಮೈಸೂರಿಗೆ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯದಲ್ಲಿ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದ ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದ ಸ್ಥಳಕ್ಕೆ ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್. ಸುಧಾಕರ್ ಅವರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕರ ಆರೋಪ: ಮೈಸೂರು- ಕೆ.ಆರ್.ಪೇಟೆ ಮುಖ್ಯ ರಸ್ತೆಯಲ್ಲಿ ಅನೇಕ ಹಂಪ್ಸ್ ಗಳು ಇದ್ದು ಈ ರೀತಿ ಅನೇಕ ಅಪಘಾತಗಳಿಗೆ ಕಾರಣವಾಗಿವೆ ಹಾಗಾಗಿ ರಸ್ತೆ ಹಂಪ್ಸ್ ಗಳನ್ನು ತೆರವುಗೊಳಿಸಬೇಕು ಎಚ್ಚರಿಕೆ ಫಲಕಗಳನ್ನು ಹಾಕಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
- ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


