ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿ ಇಮ್ಮಡಿ ಮಹಾದೇವ ಸ್ವಾಮಿ ಬೆಂಬಲಿಗರರಿಂದ ಜೀವ ಬೆದರಿಕೆ
ಸುಳ್ವಾಡಿ ವಿಷ ಪ್ರಸಾದ ದುರಂತದ ಆರೋಪಿ ಇಮ್ಮಡಿ ಮಹಾದೇವ ಸ್ವಾಮಿ ಬೆಂಬಲಿಗರು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಮಠದ ಪಟ್ಟದ ಗುರುಸ್ವಾಮೀಜಿಗೆ ಜೀವ ಬೆದರಿಕೆ ಹಾಕುತ್ತಿರುವ ಆರೋಪ ಕೇಳಿಬಂದಿದೆ.

ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ದುರಂತದ ಆರೋಪಿ ಇಮ್ಮಡಿ ಮಹಾದೇವ ಸ್ವಾಮಿ ಬೆಂಬಲಿಗರು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಮಠದ ಪಟ್ಟದ ಗುರುಸ್ವಾಮೀಜಿಗೆ ಜೀವ ಬೆದರಿಕೆ ಹಾಕುತ್ತಿರುವ ಆರೋಪ ಕೇಳಿಬಂದಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಹಿರಿಯ ಶ್ರೀಗಳು, ಇಮ್ಮಡಿ ಮಹಾದೇವಸ್ವಾಮಿ ಬೆಂಬಲಿಗರು ನಿತ್ಯ ಮಠಕ್ಕೆ ಕುಡಿದು ಬಂದು ಗಲಾಟೆ ಮಾಡುತ್ತಿದ್ದಾರೆ. ಅಲ್ಲದೇ ಪ್ರಾಣ ಬೆದರಿಕೆ ಹಾಕುತ್ತಿದ್ದು, ಈ ಕುರಿತು ದೂರು ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಸಾಲೂರು ಮಠದಲ್ಲಿ ಮುಗಿಯದ ವಿವಾದ:

ಬಳಿಕ, ವಿಲ್ ವಿಚಾರವಾಗಿ ಮಠದ ಭಕ್ತಾದಿಗಳು ತೀವ್ರ ಆಕ್ರೋಶ ಹೊರಹಾಕಿದ್ದರಿಂದ ಕಳೆದ ಅಕ್ಟೋಬರ್ 13 ರಂದು ವಿಲ್ ವಾಪಸ್ ಪಡೆದಿದ್ದರು. ಈ ಕುರಿತು ತಮ್ಮ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿರುವ ಹಿರಿಯ ಶ್ರೀಗಳ ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ವಿಲ್ ಮಾಡಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.
ಸುಳ್ವಾಡಿ ವಿಷ ಪ್ರಸಾದ ದುರಂತದ ಬಳಿಕ ಕಾಣಿಕೆ ಹಸುಗಳ ಮಾರಾಟ, ಭಕ್ತರ ಗಮನಕ್ಕೆ ತರದೇ ಮರಣಶಾಸನ ಮಾಡಿದ್ದು, ಈಗ ಹಿರಿಯ ಸ್ವಾಮೀಜಿಗೆ ಜೀವ ಬೆದರಿಕೆ ಹಾಕಿರುವ ಘಟನೆಗಳ ಮೂಲಕ ಸಾಲೂರು ಮಠದ ಸುತ್ತ ವಿವಾದಗಳ ಸುರುಳಿ ಸುತ್ತಿಕೊಂಡಂತಾಗಿದೆ.
-ವರದಿ: ನಂದೀಶ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


