ರಾಜ್ಯ

ಗಂಗಾವತಿ: ಮಹಾ ಮಳೆ; ಶ್ರೀಕೃಷ್ಣದೇವರಾಯನ ಸಮಾಧಿ ಜಲಾವೃತ

ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ.

ಗಂಗಾವತಿ: ಮಹಾ ಮಳೆ; ಶ್ರೀಕೃಷ್ಣದೇವರಾಯನ ಸಮಾಧಿ ಜಲಾವೃತ
ಕೃಷ್ಣದೇವರಾಯ
Published On :

ಗಂಗಾವತಿ: ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ. 

ಪರಿಣಾಮ ತಾಲ್ಲೂಕಿನ ವಿದೇಶಿಗರ ಹಾಗೂ ಪ್ರವಾಸಿ ತಾಣವಾದ ವಿರುಪಾಪುರಗಡ್ಡೆ ಜಲಾವೃತವಾಗಿದೆ. ಅಲ್ಲದೇ ಆನೆಗೊಂದಿ ಸಮೀಪದ ಐತಿಹಾಸಿಕ ಶ್ರೀಕೃಷ್ಣದೇವರಾಯನ ಸಮಾಧಿ ಬಹುತೇಕ ಜಲಾವೃತವಾಗಿದೆ. 

ವಿರುಪಾಪುರಗಡ್ಡೆಯು ನಡುಗಡ್ಡೆಯಾಗಿದ್ದು, ಗ್ರಾಮದ ಸುತ್ತಲೂ ನದಿಯಿಂದ ಜಲಾವೃತವಾಗಿದೆ. ಹೀಗಾಗಿ ಜನ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಆನೆಗೊಂದಿ ಸಮೀಪದ ನವವೃಂದಾವನಕ್ಕೂ ಸಂಪರ್ಕ ಕಡಿತವಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.