ಭಾರಿ ಮಳೆ: ಶೀಘ್ರ ಮುಂಜಾಗ್ರತಾ ಕ್ರಮಕ್ಕೆ ಸಿಎಂ ಯಡಿಯೂರಪ್ಪ ಸೂಚನೆ
ರಾಜ್ಯದ ಹಲವೆಡೆ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರನ್ನು ರಕ್ಷಿಸಲು ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರನ್ನು ರಕ್ಷಿಸಲು ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.
ಹವಾಮಾನ ಇಲಾಖೆ ಅಧಿಕಾರಿಗಳು ಹೆಚ್ಚಿನ ಮಳೆಯಾಗಬಹುದೆಂದು ಸೂಚನೆ ನೀಡಿರುವ ಕಾರಣ ತಗ್ಗುಪ್ರದೇಶಗಳಲ್ಲಿರುವ ಸಾರ್ವಜನಿಕರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ, ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ಈ ಸಂಬಂಧ ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ಹಾವೇರಿ ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಮುಖ್ಯಮಂತ್ರಿ ಮಾಹಿತಿ ಪಡೆದು ಪ್ರವಾಹದಿಂದ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವವರ ರಕ್ಷಣೆಗೆ ಆದ್ಯತೆ ನೀಡುವಂತೆ ಹೇಳಿದರು. ಮಳೆಯಿಂದ ಅನಾಹುತ ಸಂಭವಿಸಿದ ಕಡೆ ಅಧಿಕಾರಿಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು, ಕಾಳಜಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳು ಸೇರಿದಂತೆ ಅಗತ್ಯ ತುರ್ತು ಸೇವೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.
ಅಗತ್ಯವಿರುವೆಡೆ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್, ಅಗ್ನಿಶಾಮಕ ಮತ್ತು ತುರ್ತು ಸೇವೆ, ಸಂಘ-ಸಂಸ್ಥೆಗಳ ಜೊತೆ ಕೈಜೋಡಿಸಿ ಸಂತ್ರಸ್ತರಿಗೆ ನೆರವು ಒದಗಿಸುವಂತೆ ಹಾಗೂ ಹೆಚ್ಚು ಮಳೆಯಾಗುತ್ತಿರುವ ಪ್ರದೇಶಗಳಿಗೆ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಬೇಕೆಂದು ಯಡಿಯೂರಪ್ಪ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


