ರಾಜ್ಯ

ಪತ್ರಕರ್ತರಿಗೆ ನಿವೇಶನ ನೀಡಲು ತಕ್ಷಣ ಕ್ರಮ: ಸಚಿವ ಆರ್.ಅಶೋಕ್ ಭರವಸೆ

ಪತ್ರಕರ್ತರಿಗೆ ನಿವೇಶನ ನೀಡಲು ಸರಕಾರ ತಕ್ಷಣ ಕ್ರ‌ಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಭರವಸೆ ನೀಡಿದ್ದಾರೆ.

ಪತ್ರಕರ್ತರಿಗೆ ನಿವೇಶನ ನೀಡಲು ತಕ್ಷಣ ಕ್ರಮ: ಸಚಿವ ಆರ್.ಅಶೋಕ್ ಭರವಸೆ
ಸಂಗ್ರಹ ಚಿತ್ರ
Published On :

ಮಂಗಳೂರು: ಪತ್ರಕರ್ತರಿಗೆ ನಿವೇಶನ ನೀಡಲು ಸರಕಾರ ತಕ್ಷಣ ಕ್ರ‌ಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಭರವಸೆ ನೀಡಿದ್ದಾರೆ.

ಪತ್ರಕರ್ತರಿಗೆ ನಿವೇಶನ ಒಸಗಿಸುವುದಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಸಚಿವರು ಪತ್ರಕರ್ತರಿಗೆ ನಿವೇಶನ ನೀಡುವ ಕುರಿತು ಬೆಂಗಳೂರಿನಿಂದಲೂ ಮನವಿ ಬಂದಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್ , ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.