ಬಂಡೀಪುರ ಕಾಡಂಚಿನ ಗ್ರಾಮದಲ್ಲಿ ಕರಡಿ ದಾಳಿಗೆ ವೃದ್ಧ ಬಲಿ

ಚಾಮರಾಜನಗರ: ವೃದ್ಧರೊಬ್ಬರು ಕರಡಿ ದಾಳಿಗೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ.
ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಜಮೀನಿನಲ್ಲಿ ಇದ್ದ ವೇಳೆ ವೃದ್ಧ ಮಹದೇವ ಶೆಟ್ಟಿ(70) ಎಂಬುವರು ಕರಡಿ ದಾಳಿಗೆ ಬಲಿಯಾಗಿದ್ದಾರೆ.
ಓಂಕಾರ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕರಡಿ ಹೆಚ್ಚಿರುವುದರಿಂದ ಕರಡಿ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತೆರಕಣಾಂಬಿ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಗಡಿ ಜಿಲ್ಲೆಯಲ್ಲಿ ಪ್ರಾಣಿಗಳ ಉಪಟಳ ಮಿತಿಮೀರಿದ್ದು ಹುಲಿ, ಚಿರತೆ, ಆನೆ ಬಳಿಕ ಈಗ ಜನರಿಗೆ ಕರಡಿ ಭೀತಿ ಶುರುವಾಗಿದೆ.
ಕೊಲೆಯೂ ಆಗಿರಬಹುದು
ವ್ಯಕ್ತಿಯ ಮುಖದ ಮೇಲೆ ಮಾತ್ರ ಗಾಯದ ಗುರುತುಗಳಿದ್ದು, ಯರಾದರೂ ಕೊಲೆ ಮಾಡಿ ಬಿಸಾಡಿದ ಬಳಿಕ ಕಾಡುಪ್ರಾಣಿಗಳು ತಿಂದು ಹಾಕಿರುವ ಶಂಕೆಯೂ ವ್ಯಕ್ತವಾಗಿದೆ.
ವರದಿ: ನಂದೀಶ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


