ವರದಾ ನದಿಯಲ್ಲಿ ಕಾಲು ಜಾರಿದ ಯುವಕ, ರಕ್ಷಿಸಲು ಹೋದ ವೃದ್ಧ ಇಬ್ಬರು ನೀರುಪಾಲು
ವರದಾ ನದಿಯಲ್ಲಿ ಎತ್ತಿನ ಮೈತೊಳೆಯುತ್ತಿದ್ದ ವೇಳೆ ಆಯತಪ್ಪಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋಗಿ ಇಬ್ಬರು ನೀರುಪಾಲಾದ ಘಟನೆ ಹಾವೇರಿ ತಾಲೂಕು ಹಂದಿಗನೂರ ಗ್ರಾಮದಲ್ಲಿ ನಡೆದಿದೆ.

ಹಾವೇರಿ: ವರದಾ ನದಿಯಲ್ಲಿ ಎತ್ತಿನ ಮೈತೊಳೆಯುತ್ತಿದ್ದ ವೇಳೆ ಆಯತಪ್ಪಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋಗಿ ಇಬ್ಬರು ನೀರುಪಾಲಾದ ಘಟನೆ ಹಾವೇರಿ ತಾಲೂಕು ಹಂದಿಗನೂರ ಗ್ರಾಮದಲ್ಲಿ ನಡೆದಿದೆ.
ಪ್ರಶಾಂತ ಸೋಮಪ್ಪ ಕೊಂಚಿಗೇರಿ (18) ಮತ್ತು ಪರಮೇಶಪ್ಪ ಕಮ್ಮಾರ (62) ನೀರುಪಾಲಾದ ದುರ್ದೈವಿಗಳು.
ಎತ್ತಿನ ಮೈ ತೊಳೆಯಲು ಮಾವನ ಜೊತೆ ಹೋಗಿದ್ದ ಪ್ರಶಾಂತ್ ಕಾಲುಜಾರಿ ವರದಾ ನದಿಯಲ್ಲಿ ಮುಳುಗಿದ್ದಾರೆ.
ಇದನ್ನು ಕಂಡು ಅಲ್ಲೆ ಸ್ನಾನ ಮಾಡುತ್ತಿದ್ದ ವೃದ್ಧರೋರ್ವರು ಪ್ರಶಾಂತ್ ರಕ್ಷಣೆಗೆ ಮುಂದಾಗಿದ್ದರು. ಆದರೆ ನೀರಿನ ರಭಸ ಹೆಚ್ಚಾಗಿದ್ದರಿಂದ ಇಬ್ಬರೂ ಕೂಡ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ.
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು , ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಈ ಸಂಬಂಧ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


