ರಾಜ್ಯ

ಚಿಕ್ಕಮಗಳೂರು: ಹಳ್ಳಕ್ಕೆ ಬಿದ್ದ ಕಾರು, ಮೂವರ ದುರ್ಮರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಶುಕ್ರವಾರ ವೇಗವಾಗಿ ಬಂದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಮೂವರು ಸಾವನ್ನಪ್ಪಿದ್ದು. ಇಬ್ಬರು ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು: ಹಳ್ಳಕ್ಕೆ ಬಿದ್ದ ಕಾರು, ಮೂವರ ದುರ್ಮರಣ
ಚಿಕ್ಕಮಗಳೂರು: ಹಳ್ಳಕ್ಕೆ ಬಿದ್ದ ಕಾರು, ಮೂವರ ದುರ್ಮರಣ
Published On :

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಶುಕ್ರವಾರ ವೇಗವಾಗಿ ಬಂದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಮೂವರು ಸಾವನ್ನಪ್ಪಿದ್ದು. ಇಬ್ಬರು ಗಾಯಗೊಂಡಿದ್ದಾರೆ.

ಚಾಲಕ ತೀಕ್ಷ್ಣ ತಿರುವು ತೆಗೆದುಕೊಳ್ಳುವಾಗ ನಿಯಂತ್ರಣ ಕಳೆದುಕೊಂಡಾಗ ಈ ಘಟನೆ ಸಂಭವಿಸಿದೆ.ವಾಹನ ಕಂದಕಕ್ಕೆ ಬಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಯಶೋಧಾ (82), ಪ್ರಕಾಶ್ (61), ಅನಿರುದ್ಧ್ (24) ಎಂದು ಗುರುತಿಸಲಾಗಿದೆ.

ಮೃತರು ಬೆಂಗಳೂರಿನ ನಿವಾಸಿಗಳಾಗಿದ್ದು,  ಅನುರೂಪಾ (19) ಮತ್ತು ನರಸಿಂಹರಾವ್ (91) ಎನ್ನುವವರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತಂತೆ ಬಣಕಲ್ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.