ಕುಣಿಗಲ್'ನಲ್ಲಿ ಭೀಕರ ಅಪಘಾತ: ಕಾರು-ಟ್ರ್ಯಾಕ್ಟರ್ ಡಿಕ್ಕಿ, ಐವರ ದುರ್ಮರಣ
ವೇಗವಾಗಿ ಬರುತ್ತಿದ್ದ ಕಾರೊಂದು ಟ್ರ್ಯಾಕ್ಟರ್'ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಅಮೃತೂರು ಹೋಬಳಿ ಹೊಸಕೆರೆ ಗ್ರಾಮದ ಬಳಿ ನಡೆದಿದೆ.

ತುಮಕೂರು: ವೇಗವಾಗಿ ಬರುತ್ತಿದ್ದ ಕಾರೊಂದು ಟ್ರ್ಯಾಕ್ಟರ್'ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಅಮೃತೂರು ಹೋಬಳಿ ಹೊಸಕೆರೆ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಕಿರಣ್ (24), ರಾಜಣ್ಣ (55), ಮೋಹನ್ (22), ಮಧು (26), ರಂಗಸ್ವಾಮಿ (58) ಎಂದು ಗುರ್ತಿಸಲಾಗಿದೆ. ಮೃತರೆಲ್ಲರೂ ದೊಡ್ಡಕಲ್ಲಹಳ್ಳಿ ಗ್ರಾಮದವರೆಂದು ತಿಳಿದುಬಂದಿದೆ.
ಹಬ್ಬಕ್ಕೆ ಊರಿಗೆ ತೆರಳಿದ್ದ ಮೃತ ವ್ಯಕ್ತಿಗಳು ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ಚಾಲಕ ಕಾರಿನ ಮೇಲಿದ್ದ ನಿಯಂತ್ರಣವನ್ನು ಕಳೆದುಕೊಂಡು ರಸ್ತೆಯಲ್ಲಿ ತೆರಳುತ್ತಿದ್ದ ಟ್ರ್ಯಾಕ್ಟರ್'ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


