ಟಿಪ್ಪು ಜಯಂತಿ ಆಚರಿಸಿಯೇ ತೀರುತ್ತೇವೆ: ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್
ಟಿಪ್ಪು ಜಯಂತಿ ಆಚರಣೆ ಮಾಡಿಯೇ ಮಾಡುತ್ತೇವೆ ಎಂದು ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರ, ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಶರತ್ಬಚ್ಚೇಗೌಡ ಹೇಳಿದ್ದಾರೆ.

ಹೊಸಕೋಟೆ: ಟಿಪ್ಪು ಜಯಂತಿ ಆಚರಣೆ ಮಾಡಿಯೇ ಮಾಡುತ್ತೇವೆ ಎಂದು ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರ, ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಶರತ್ಬಚ್ಚೇಗೌಡ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲವು ಬಾರಿ ನನಗೆ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಸಾಕಷ್ಟು ಜನ ಹೇಳಿದರು. ಆದರೆ, ಈ ಬಾರಿಯ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡುತ್ತೇವೆ ಎಂದು ಅವರು ತಿಳಿಸಿದರು.
ಈ ಮೂಲಕ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ಟಿಪ್ಪು ಅಸ್ತ್ರ ಪ್ರಯೋಗಿಸಿದ್ದಾರೆ. ನಮ್ಮೂರಿನ ಪಕ್ಕದಲ್ಲಿರುವ ತಮ್ಮರಸನಹಳ್ಳಿಯಲ್ಲಿ ಟಿಪ್ಪು ಜಯಂತಿಯನ್ನು ಮಾಡುತ್ತೇವೆ ಎಂದು ಹೇಳುತ್ತಿದ್ದಂತೆ ಶರತ್ ಬಚ್ಚೇಗೌಡ ಅವರ ಮೇಲೆ ಅಭಿಮಾನಿಗಳು ಹಣ ಸುರಿದು ಹರ್ಷ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


