ರಾಜ್ಯ

ಚಿಕ್ಕಮಗಳೂರು: ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ದುರ್ಮರಣ

ಸೇತುವೆ ಮೇಲೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಇಲ್ಲಿ ಸಂಭವಿಸಿದೆ.

ಚಿಕ್ಕಮಗಳೂರು: ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ದುರ್ಮರಣ
ಕಾರು ಅಪಘಾತ
Published On :

ಮೂಡಿಗೆರೆ: ಸೇತುವೆ ಮೇಲೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಇಲ್ಲಿ ಸಂಭವಿಸಿದೆ.

ಹೆಬ್ಬಾಳದ ಯಶೋಧ (81) ಪ್ರಕಾಶ್​(61) ಹಾಗೂ ಅನಿರುದ್ಧ್ (24)ಮೃತಪಟ್ಟವರು. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ  ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿಯ ನೀರುಗಂಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಯಶೋಧ ಕುಟುಂಬದವರು ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಕ್ಕೆ ತೆರಳಿದ್ದರು. ಕೊಟ್ಟಿಗೆಹಾರ ರಸ್ತೆಯಲ್ಲಿ ಕಾರು ಸಂಚರಿಸುತ್ತಿದ್ದ ವೇಳೆ ನೀರುಗಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿತ್ತು. ಹಳ್ಳದಲ್ಲಿ ನೀರು ರಭಸವಾಗಿ ಹರಿಯುತ್ತಿದ್ದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದವರನ್ನು ರಕ್ಷಿಸಲು ತೊಂದರೆಯಾಯಿತು ಎಂದು ತಿಳಿದು ಬಂದಿದೆ. ಬಣಕಲ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.