ಆರ್'ಸಿಇಪಿಯಿಂದ ಡೈರಿ, ಕೃಷಿ ವಲಯ ನಾಶ: ಕಾಂಗ್ರೆಸ್
ಭಾರತ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಹೈನೋದ್ಯಮಕ್ಕೆ ಮಾರಕ ಹೊಡೆತ ನೀಡುವ ಸಾಧ್ಯತೆಯುಳ್ಳ ಆಸಿಯಾನ್ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ತರಾತುರಿಯಲ್ಲಿ ಸಹಿ ಹಾಕದಂತೆ ಕಾಂಗ್ರೆಸ್ ಆಗ್ರಹಿಸಿದೆ.

ಬೆಂಗಳೂರು: ಭಾರತ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಹೈನೋದ್ಯಮಕ್ಕೆ ಮಾರಕ ಹೊಡೆತ ನೀಡುವ ಸಾಧ್ಯತೆಯುಳ್ಳ ಆಸಿಯಾನ್ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ತರಾತುರಿಯಲ್ಲಿ ಸಹಿ ಹಾಕದಂತೆ ಕಾಂಗ್ರೆಸ್ ಆಗ್ರಹಿಸಿದೆ.
ಆಪಾಯಕಾರಿ ಒಪ್ಪಂದದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ. ರೈತರ ರಕ್ಷಣೆಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಯಾವುದೇ ತಯಾರಿ ಇಲ್ಲದೆಯೇ ನೋಟು ನಿಷೇಧ ಹಾಗೂ ಜಿಎಸ್'ಟಿ ಜಾರಿಗೆ ತರಲಾಗಿತ್ತು. ಇದಾದ ಬಳಿಕ ಎಫ್'ಟಿಎ ಮತ್ತೊಂದು ಸಂಕಷ್ಟವಾಗಲಿದೆ.
2018ರ ನೀತಿ ಆಯೋಗದ ವರದಿ ಪ್ರಕಾರ ಮುಂದಿನ ವರ್ಷಗಳಲ್ಲಿ ಹೈನೋತ್ಪಾದನೆಗೆ ಹೆಚ್ಚಿನ ಬೇಡಿಕೆಗಳು ಬರಲಿದೆ. ಡೈರಿ ಪದಾರ್ಥಗಳಿಗೆ ಹೆಚ್ಚಿನ ಅವಕಾಶಗಳು ಸಿಗುತ್ತವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.
ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ ಅಥವಾ ಇನ್ನಾವುದೇ ದೇಶಗಳಿಗೆ ಹೋಲಿಕೆ ಮಾಡಿದರೆ, ನಮ್ಮ ದೇಶದ ಕೃಷಿ ಕಾರ್ಮಿಕರು ಹೈನೋತ್ಪಾದನೆ ಮೇಲೆ ಹೆಚ್ಚಿನ ಅವಲಂಬಿತರಾಗಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


