ರಾಜ್ಯ

ಪ್ರವಾಹ ಪುನರ್ವತಿಯಲ್ಲಿ ಆರ್ಥಿಕ ಕೊರತೆಯಿಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಪ್ರವಾಹ ಸಂತ್ರಸ್ತರಿಗೆ ಸೂಕ್ತ ರೀತಿಯ ನೆರವು ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಪ್ರವಾಹ ಪುನರ್ವಸತಿಯಲ್ಲಿ ಯಾವುದೇ ರೀತಿಯ ಆರ್ಥಿಕ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಪ್ರವಾಹ ಪುನರ್ವತಿಯಲ್ಲಿ ಆರ್ಥಿಕ ಕೊರತೆಯಿಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಯಡಿಯೂರಪ್ಪ
Published On :

ಹುಬ್ಬಳ್ಳಿ: ಪ್ರವಾಹ ಸಂತ್ರಸ್ತರಿಗೆ ಸೂಕ್ತ ರೀತಿಯ ನೆರವು ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಪ್ರವಾಹ ಪುನರ್ವಸತಿಯಲ್ಲಿ ಯಾವುದೇ ರೀತಿಯ ಆರ್ಥಿಕ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 

ಉಪಚುನಾವಣೆ ಹತ್ತಿರಬರುತ್ತಿರುವ ಹಿನ್ನಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳ ನಾಯಕರೊಂದಿಗೆ ಹುಬ್ಬಳ್ಳಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಅವರು ಮುಂದಿನ ನಡೆಗಳ ಕುರಿತು ಚರ್ಚೆ ನಡೆಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ಕುರಿತಂತೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾತನಾಡಿದರು. 

ನೆರೆ ಪೀಡಿತರ ಕುರಿತು ಶೀಘ್ರಗತಿಯಲ್ಲಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟಂತಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೆರೆ ಪೀಡಿತರಿಗೆ ಪರಿಹಾರ ನೀಡುವಲ್ಲಿ ಯಾವುದೇ ರೀತಿಯ ಆರ್ಥಿಕ ಕೊರತೆಗಳಿಲ್ಲ ಎಂದು ತಿಳಿಸಿದ್ದಾರೆ. 

ಇನ್ನು ಸಭೆಯಲ್ಲಿ ಬಿಜೆಪಿ ನಾಯಕರು ಪಕ್ಷಕ್ಕೆ ಬಂದಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರಲ್ಲಿ ಯಾರಾದರೂ ಗೆಲ್ಲುವ ಅಭ್ಯರ್ಥಿಗಳಿದ್ದಾರೆಯೇ ಎಂಬುದರ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. 

ಇನ್ನು ವಿಮಾನ ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದ ಸಿಎಂ, ಸಿದ್ದರಾಮಯ್ಯ ಅವರಿಗೆ ಹೇಗೆ ಮಾತನಾಡಬೇಕು, ಏನನ್ನು ಮಾತನಾಡಬೇಕೆಂಬುದು ತಿಳಿದಿಲ್ಲ. ಸ್ಪೀಕರ್ ಕುರಿತು ಟೀಕೆ ಮಾಡಿದ್ದಕ್ಕೆ ಮೊದಲು ಕ್ಷಮೆಯಾಚಿಸಬೇಕು. ಇಲ್ಲದೇ ಹೋದಲ್ಲಿ, ಜನರೇ ಅವರಿಗೆ ಸರಿಯಾದ ಪಾಠ ಕಲಿಸುತ್ತಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.