ಚಿಕ್ಕಮಗಳೂರು: ಈಜಲು ಹೋಗಿದ್ದ ಯುವಕ ಸಾವು
ಹಳ್ಳದಲ್ಲಿ ಈಜಲು ಹೋಗಿದ್ದ ಯುವಕನೊರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು: ಹಳ್ಳದಲ್ಲಿ ಈಜಲು ಹೋಗಿದ್ದ ಯುವಕನೊರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ನಡೆದಿದೆ.
ಇಟ್ಟಿಗೆ ಹಳ್ಳದಲ್ಲಿ ಈಜಲು ಹೋಗಿದ್ದ ಯುವಕ 18 ವರ್ಷದ ಸಂದೀಪ್ ಮೃತ ದುರ್ದೈವಿ. ಸಂದೀಪ್ ಎ.ರಂಗಾಪುರ ನಿವಾಸಿಯಾಗಿದ್ದು, ಹಳ್ಳದಲ್ಲಿ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾನೆ.
ಯುವಕನ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆಗೆ ಸಂಬಂಧಿಸಿದಂತೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


