ರಾಜ್ಯ

ಯಾದಗಿರಿ: ಬಸ್ಸು ಹರಿದು ಬಾಲಕ ದುರ್ಮರಣ

ಅಜ್ಜಿ , ಮೊಮ್ಮಗನ ಮೇಲೆ ಬಸ್ಸು ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ‌ ಮಂಗಳವಾರ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ಯಾದಗಿರಿ: ಬಸ್ಸು ಹರಿದು ಬಾಲಕ ದುರ್ಮರಣ
ಸಂಗ್ರಹ ಚಿತ್ರ
Published On :

ಯಾದಗಿರಿ: ಅಜ್ಜಿ , ಮೊಮ್ಮಗನ ಮೇಲೆ ಬಸ್ಸು ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ‌ ಮಂಗಳವಾರ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ಮಹಮ್ಮದ್ ಮುಬಾರಕ್(5) ಮೃತಪಟ್ಟಿರುವ ಬಾಲಕ. ಅಜ್ಜಿ ನೂರ್ ಬೇಗಂ(42) ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ರಸ್ತೆ ದಾಟುತ್ತಿರುವುದನ್ನು ಗಮನಿಸದ ಕೆಎಸ್‍ಆರ್ ಟಿಸಿಚಾಲಕ ಏಕಾಏಕಿ ಬಸ್ ಸ್ಟಾರ್ಟ್ ಮಾಡಿದ್ದು ಮುಂದೆ ಚಲಿಸಿದ ಕಾರಣ ಇಬ್ಬರೂ ಬಸ್ ಚಕ್ರದಡಿ ಸಿಕ್ಕಿದ್ದಾರೆ.ಘಟನೆ ಕುರಿತಂತೆ  ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.