ರಾಜ್ಯ

ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತ ಎನ್.ವೆಂಕಟಾಚಲ ವಿಧಿವಶ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ಎನ್ ವೆಂಕಟಾಚಲ (90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತ ಎನ್.ವೆಂಕಟಾಚಲ ವಿಧಿವಶ
ಎನ್.ವೆಂಕಟಾಚಲ
Published On :

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ಎನ್ ವೆಂಕಟಾಚಲ (90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ ಎಂದು ಎಂ.ಎಸ್.ರಾಮಯ್ಯ ಆಸ್ಪತ್ರೆ ಮೂಲಗಳು ತಿಳಿಸಿವೆ. ನಂಜೇಗೌಡ ವೆಂಕಟಾಚಲ ಅವರ ಪೂರ್ಣ ಹೆಸರು. 2001 ರಿಂದ 2006 ರವರೆಗೆ ಕರ್ನಾಟಕ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು.

ಕರ್ನಾಟಕದ ಲೋಕಾಯುಕ್ತರಾಗಿ ಹಾಗೂ 18 ತಿಂಗಳು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಧೀಶರಾಗಿ ಕೂಡ ಸೇವೆ ಸಲ್ಲಿಸಿದ್ದರು.

ಇವರು 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಇವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.